ನಟ ಅನಿರುದ್ಧ್ 
ಸಿನಿಮಾ ಸುದ್ದಿ

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ

ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 
ವಿಷ್ಣು ಸ್ಮಾರಕ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜೊತೆಗೆ ಹಿರಿಯ ನಟರಾದ ರಾಜ್ ಕುಮಾರ್, ಅಂಬರೀಷ್ ಹೆಸರಿನಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್ ಮಾಡಲಾಗುವುದು ಎಂದು ಹೇಳುವ ಸರ್ಕಾರ, ವಿಷ್ಣುವರ್ಧನ್ ಹೆಸರಿನಲ್ಲಿ ಏಕೆ ಫಿಲ್ಮ್ ಇನ್ಸ್'ಟಿಟ್ಯೂಟ್ ಮಾಡುತ್ತೇನೆಂದು ಹೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಗ್ಗೆ ನನಗ್ಯಾವ ಕೋಪವೂ ಇಲ್ಲ. ಅವರ ಮೇಲೆ ಭರವಸೆಯಿದೆ. ಹಾಗೆಯೇ ನನ್ನ ಹೇಳಿಕೆ ವೈಯಕ್ತಕವೂ ಆಗಿರಲಿಲ್ಲ. ಆದರೆ, ವಿಷ್ಣು ಸ್ಮಾರಕ ವಿಚಾರವನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆಯಲ್ಲೂ ಅವರು ವಿಷ್ಣು ಸ್ಮಾರಕ ವಿಚಾರವನ್ನು ಪ್ರಸ್ತಾಪಿಸಿಲ್ಲ. ಅದೇ ನನಗೆ ನೋವು ತಂದಿದೆ ಎಂದು ತಿಳಿಸಿದರು. 
ಈ ನಡುವೆ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಿಸುವ ಸಂಬಂಧ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿಯವರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?