ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಇದು ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಪುನೀತ್ ಕೊಡುತ್ತಿರುವ ಗಿಫ್ಟ್!

2019ರ ಜನವರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಉಡುಗೊರೆ ನೀಡಲಿದ್ದಾರೆ, ಅಪ್ಪು ಅಭಿನಯದ ನಟಸಾರ್ವಭೌಮ ಚಿತ್ರ ...

ಬೆಂಗಳೂರು: 2019ರ ಜನವರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಅಭಿಮಾನಿಗಳಿಗೆ  ಉಡುಗೊರೆ ನೀಡಲಿದ್ದಾರೆ, ಅಪ್ಪು ಅಭಿನಯದ ನಟಸಾರ್ವಭೌಮ ಚಿತ್ರ ಜನವರಿ ಕೊನೆಯ ವಾರ ಅಂದರೇ ಜನವರಿ 26 ರಂದು ರಿಲೀಸ್ ಆಗಲಿದೆ,.
ರಾಕ್ ಲೈನ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ ಚಿತ್ರ ರಿಪಬ್ಲಿಕ್ ಡೇ ವೇಳೆ ಬಿಡುಗಡೆಯಾಗಲಿದೆ. ಪವನ್ ಒಡೆಯರ್ ನಿರ್ದೇಶನದ ಚಿತ್ರದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ, ಶೀಘ್ರವೇ ನಿರ್ದೇಶಕರು ಅದರ ಮೊದಲ ಕಾಪಿ ಹೊರ ತರಲಿದ್ದಾರೆ. 
ಚಿತ್ರದಲ್ಲಿ ರಚಿತಾ ರಾಮ್‌ ನಾಯಕಿಯಾಗಿ ನಟಿಸಿದ್ದಾರೆ.ಇನ್ನು ಚಿತ್ರದಲ್ಲಿ ಹಿರಿಯ ನಟಿ ಬಿ.ಸರೋಜಾದೇವಿ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ತುಂಬಾ ವರ್ಷಗಳ ನಂತರ ಅವರು ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಕೂಡಾ ಪ್ರಮುಖವಾಗಿದೆ. ಚಿತ್ರಕ್ಕೆ ಡಿ ಇಮಾನ್‌ ಸಂಗೀತ ನೀಡುತ್ತಿದ್ದು, ವೈದಿ ಛಾಯಾಗ್ರಹಣವಿದೆ. ಈ ಹಿಂದೆ ಪವನ್‌ ಒಡೆಯರ್‌ ಅವರ "ಗೂಗ್ಲಿ' ಹಾಗೂ "ರಣವಿಕ್ರಮ' 
ಚಿತ್ರಗಳಿಗೂ ವೈದಿ ಛಾಯಾಗ್ರಹಣವಿತ್ತು.
ಇನ್ನೂ ನಟ ಸಾರ್ವಭೌಮ ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಖರೀದಿಸಿದ್ದು, ಶೀಘ್ರವೇ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!