ದುಬೈಗೆ ಉಪೇಂದ್ರ ಮತ್ತು ರಚಿತಾ ರಾಮ್ ಪ್ರಯಾಣ!
ಆರ್.ಚಂದ್ರು ನಿರ್ದೇಶನದ ಐ ಲವ್ ಯೂ ಸಿನಿಮಾ ಶೂಟಿಂಗ್ ಬಹುತೇಕ ಮುಗಿದಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ನಟ ಉಪೇಂದ್ರ ಮತ್ತು ರಚಿತಾ ರಾಮ್ ...
ಬೆಂಗಳೂರು: ಆರ್.ಚಂದ್ರು ನಿರ್ದೇಶನದ ಐ ಲವ್ ಯೂ ಸಿನಿಮಾ ಶೂಟಿಂಗ್ ಬಹುತೇಕ ಮುಗಿದಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ನಟ ಉಪೇಂದ್ರ ಮತ್ತು ರಚಿತಾ ರಾಮ್ ಶೀಘ್ರವೇ ದುಬೈಗೆ ತೆರಳಲಿದ್ದಾರೆ.
ನಿರ್ದೇಶಕ ಆರ್.ಚಂದ್ರು ಈಗಾಗಲೇ ದುಬೈಗೆ ತೆರಳಿದ್ದು, ಲೋಕೇಶನ್ ಹುಡುಕಾಟದಲ್ಲಿದ್ದಾರೆ, ಪ್ರೀತ್ಸೆ ಸಿನಿಮಾದ ಪ್ರೀತ್ಸೆ ಪ್ರೀತ್ಸೆ ಹಾಡಿನ ಕೆಲವು ಸಾಲುಗಳನ್ನು ಇಲ್ಲಿಯೇ ಶೂಟಿಂಗ್ ಮಾಡಲು ಚಂದ್ರು ಪ್ಲಾನ್ ಮಾಡಿದ್ದಾರೆ.
ಕನ್ನಡ ಮತ್ತು ತೆಲುಗಿನಲ್ಲಿ ಸಿನಿಮಾ ಬರುತ್ತಿದ್ದು, ಸದ್ಯ ಸಿನಿಮಾ ಪೋಸ್ಚ್ ಪ್ರೊಡಕ್ಷನ್ ಹಂತದಲ್ಲಿದೆ, ನಿರ್ದೇಶಕ ಚಂದ್ರು ಅವರೇ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ, ಫೆಬ್ರವರಿ 8 ರಂದು ಚಂದ್ರು ಹುಟ್ಟುಹಬ್ಬವಿದ್ದು, ಅಂದೇ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆ, ಅಧಿಕೃತ ಮಾಹಿತಿ ಮಾತ್ರ ಹೊರಬೀಳಬೇಕಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.