ರಜನಿಕಾಂತ್ 
ಸಿನಿಮಾ ಸುದ್ದಿ

ವಿಶ್ವದಾದ್ಯಂತ 500 ಕೋಟಿ ರು.ಗಳಿಸಿದ ರಜನಿ-ಅಕ್ಷಯ್ '2.0'

ತಮಿಳು ಸೂಪರ್ ಸ್ಟಾರ್‌ ರಜನಿಕಾಂತ್‌ ಹಾಗೂ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅಭಿನಯದ 2.0 ಚಿತ್ರ ಬಿಡುಗಡೆಯಾಗಿ ಒಂದೇ ವಾರದಲ್ಲಿ ವಿಶ್ವದಾದ್ಯಂತ 500 ಕೋಟಿ ರುಪಾಯಿ ಸಂಪಾದನೆಯನ್ನು ದಾಖಲಿಸಿದೆ.

ನವದೆಹಲಿ: ತಮಿಳು ಸೂಪರ್ ಸ್ಟಾರ್‌ ರಜನಿಕಾಂತ್‌ ಹಾಗೂ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅಭಿನಯದ 2.0 ಚಿತ್ರ ಬಿಡುಗಡೆಯಾಗಿ ಒಂದೇ ವಾರದಲ್ಲಿ ವಿಶ್ವದಾದ್ಯಂತ 500 ಕೋಟಿ ರುಪಾಯಿ ಸಂಪಾದನೆಯನ್ನು ದಾಖಲಿಸಿದೆ.
ನವೆಂಬರ್ 29ರಂದು ತೆರೆಕಂಡ 2.0 ಚಿತ್ರ ಕೇವಲ ಏಳು ದಿನಗಳಲ್ಲಿ 500 ಕೋಟಿ ರು.ಕ್ಲಬ್ ಪ್ರವೇಶಿಸುವ ಮೂಲಕ ಹೊಸ ದಾಖಲೆ ಬರೆದಿದೆ.
ನಿರ್ಮಾಪಕ ಕರಣ್ ಜೋಹರ್ ಅವರ ಧರ್ಮಾ ಮೂವೀಸ್‌ ಈ ಚಿತ್ರದ ಹಿಂದಿ ಅವತರಣಿಕೆಯನ್ನು ಪ್ರಸ್ತುತಪಡಿಸಿದ್ದು, 2.0 ಚಿತ್ರ 500 ಕೋಟಿ ರು. ಮೀರಿದ ಜಾಗತಿಕ ಗಳಿಕೆಯನ್ನು ದಾಖಲಿಸಿದೆ ಎಂದು ಕರಣ್ ಜೋಹರ್ ಟ್ವೀಟ್ ಮಾಡಿದ್ದಾರೆ.
ಧರ್ಮಾ ಮೂವೀಸ್‌ ನಲ್ಲಿ ನಾವು 2.0 ಚಿತ್ರದ ಈ ಅಭೂತಪೂರ್ವ ಸಾಧನೆಗೆ ತುಂಬ ಸಂತಸಗೊಂಡಿದ್ದೇವೆ; ಹೆಮ್ಮೆ ಪಟ್ಟಿದ್ದೇವೆ ಎಂದು ಕರಣ್ ಜೋಹರ್ ಹೇಳಿಕೊಂಡಿದ್ದಾರೆ.
2.0 ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದವರು ಶಂಕರ್‌. ಇದು 500 ಕೋಟಿ ರೂ. ವೆಚ್ಚದ ನಿರ್ಮಾಣ. 3ಡಿ ಯಲ್ಲಿ ನಿರ್ಮಾಣಗೊಂಡ ಮತ್ತು ವಿಶ್ವಾದ್ಯಂತ 1,500 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ತೆರೆಕಂಡ ಮೊತ್ತ ಮೊದಲ ಭಾರತೀಯ ಚಿತ್ರ ಇದು ಎಂಬ ಗೌರವಕ್ಕೆ ಪಾತ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video