ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಬೇಸಿಗೆ ರಜೆಗೆ ಪೈಲ್ವಾನ್ ರಿಲೀಸ್!

2019ರ ಮಾರ್ಚ್ ತಿಂಗಳ ಅಂತ್ಯಕ್ಕೆ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ...

ಪೈಲ್ವಾನ್ ಸಿನಿಮಾ ಸ್ಟಿಲ್
Shilpa D
Updated On : 11 Dec 2018, 11:28 am
ಬೆಂಗಳೂರು: 2019ರ ಮಾರ್ಚ್ ತಿಂಗಳ ಅಂತ್ಯಕ್ಕೆ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. 
ನಿರ್ದೇಶಕ ಎಸ್.ಕೃಷ್ಣ ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ಅಡಿಯಲ್ಲಿ  ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ, ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ, 
ಹೈದರಾಬಾದ್ ನಿಂದ  ನಟ ಸುದೀಪ್ ವಾಪಾಸಗಿದ್ದಾರೆ. ಇಂದಿನಿಂದ ಮೈಸೂರಿನಲ್ಲಿ ಶೂಟಿಂಗ್ ಆರಂಭಿಸಲಿದೆ, ಮೈಸೂರಿನಲ್ಲಿರುವ ಸುದೀಪ್ ತೆಲುಗಿನ ಚಿರಂಜೀವಿ ನಟನೆಯ ಸೈ ರಾ ನರಸಿಂಹ ರೆಡ್ಡಿ ಸಿನಿಮಾದಲ್ಲೂ ಅಭಿನಯಿಸುತ್ತಿದ್ದಾರೆ. ಸುದೀಪ್ ಹೈದರಾಬಾದ್ ನಿಂದ ಮೈಸೂರಿಗೆ ಓಡಾಡುತ್ತಿದ್ದಾರೆ. 

Advertisement

Advertisement

ಈಗಾಗಲೇ ಸಿನಿಮಾದ ಶೇ, 90 ರಷ್ಟು ಭಾಗ ಶೂಟಿಂಗ್ ಮುಗಿದಿದೆ,ಇನ್ನೂ ಮೂರು ಹಾಡುಗಳು ಹಾಗೂ ಫೈಟ್ ಬಾಕಿ ಉಳಿದಿದೆ ಎಂದು ನಿರ್ದೇಶಕರು ಹೇಳಿದ್ದಾರೆ, ಇದಾದ ನಂತರ ಲೋಕೇಶನ್ ಹುಡುಕಾಟ ನಡೆಸಲಿದ್ದಾರೆ, ಟಾಕೀ ಪೋರ್ಶನ್ ಸಂಪೂರ್ಣಗೊಂಡ ನಂತರ ಬಿಡುಗಡೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
7 ಭಾಷೆಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ, ದಕ್ಷಿಣ ಭಾಷೆಯ 4 ಭಾಷೆಗಳ ಜೊತೆಗೆ  ಹಿಂದಿ, ಮರಾಠಿ, ಮತ್ತು ಬೋಜ್ ಪುರಿಯಲ್ಲೂ ರಿಲೀಸ್ ಆಗಲಿದೆ, ಈ ಸಿನಿಮಾದಲ್ಲಿ ಸುದೀಪ್ ಬಾಕ್ಸರ್ ಆಗಿ ನಟಿಸಿದ್ದಾರೆ. ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಮ ಲಕ್ಷ್ಮಣ ಸಹೋದರರು ಪೈಲ್ವಾನ್ ಸಿನಿಮಾದಲ್ಲಿ  ಫೈಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments