ಬೆಂಗಳೂರು: ಬೆಂಗಳೂರು ಕಾಲೇಜಿನಲ್ಲಿ ಪ್ರೊಫೆಸರ್ ಆಗಿರುವ ಪ್ರೇರಣಾ ಶಂಕರ್ ಜೊತೆ ನಟ ಧ್ರುವ ಸರ್ಜಾ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ, ಪೊಗರು ಸಿನಿಮಾದಲ್ಲಿ ಧ್ರುವ ಸರ್ಜಾಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.
ರಶ್ಮಿಕಾ ಪೊಗರು ಸಿನಿಮಾದಲ್ಲಿ ಪ್ರೊಫೆಸರ್ ಪಾತ್ರದಲ್ಲಿ ನಟಿಸಿದ್ದಾರೆ. ನಂದ ಕಿಶೋರ್ ನಿರ್ದೇಶನದ ಸಿನಿಮಾವನ್ನು ಬಿಕೆ ಗಂಗಾಧರ್ ನಿರ್ಮಿಸುತ್ತಿದ್ದಾರೆ, ಇಬ್ಬರು ಇದೇ ಮೊದಲು ಒಂದಾಗಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ಧ್ರುವ ಸರ್ಜಾ ನಟನೆಯ ಮೊದಲ ಹಂತದ ಶಾಲಾ ಭಾಗದ ಶೂಟಿಂಗ್ ಮುಗಿಸಿದ್ದಾರೆ, ಈಗ ತಾನೇ ನಿಶ್ಚಿತಾರ್ಥ ಮುಗಿಸಿಕೊಂಡಿರುವ ಧ್ರುವ ಸರ್ಜಾ ಮುಂದಿನ ತಿಂಗಳು ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.