ಬೆಂಗಳೂರು: ಸೇಫ್ ಗೇಮ್ ಆಡುತ್ತಾ ಎಲ್ಲರೊಂದಿಗೂ ಚೆನ್ನಾಗಿದ್ದು ಬಿಗ್‌ಬಾಸ್ ಮನೆಯಲ್ಲಿ 57 ದಿನಗಳನ್ನು ಕಳೆದಿದ್ದ ನಯನಾ ಪುಟ್ಟಸ್ವಾಮಿ ಇದೀಗ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದಾರೆ.
ನಯನಾ ಬಿಗ್‌ಬಾಸ್ ಸೀಸನ್ 6ರಲ್ಲಿ ಯಾರೊಂದಿಗೂ ಜಗಳ ಮಾಡಿಕೊಳ್ಳದೆ ಅನಿಸಿದ್ದನ್ನು ನೇರವಾಗಿ ಹೇಳುತ್ತಿದ್ದರು. ತಾವಾಯ್ತು ತಮ್ಮ ಆಟವಾಯ್ತು ಅಂತ ಇದ್ದರು. ಆದರೆ ನಯನಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲರಾದರು.
ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಶೋನಲ್ಲಿ ಗೆಲುವು ಸಾಧಿಸಿದ್ದ ನಯನಾ ನಂತರ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು.