ಯಶ್-ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಯಶ್ ಕೆಜಿಎಫ್ ಚಿತ್ರ ಬಿಡುಗಡೆ ದಿನ ಪುನೀತ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್, ಅದೇನು ಅಂತೀರಾ?

ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಇದೇ ಡಿಸೆಂಬರ್ 21ರಂದು ದೇಶಾದ್ಯಂತ ಭರ್ಜರಿಯಾಗಿ ತೆರೆಗಪ್ಪಳಿಸಲಿದ್ದು...

ಭಾರತೀಯ ಚಿತ್ರರಂಗದಲ್ಲಿ ಬಹುನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಇದೇ ಡಿಸೆಂಬರ್ 21ರಂದು ದೇಶಾದ್ಯಂತ ಭರ್ಜರಿಯಾಗಿ ತೆರೆಗಪ್ಪಳಿಸಲಿದ್ದು ಈ ದಿನವೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ದೊಡ್ಡ ಗಿಫ್ಟ್ ಸಿಗಲಿದೆ. 
ಹೌದು ಪುನೀತ್ ರಾಜಕುಮಾರ್ ತಮ್ಮ ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಿದ್ದಾರೆ. ಡಿಸೆಂಬರ್ 21ರಂದು ಕೆಜಿಎಫ್ ಚಿತ್ರದ ಜೊತೆಗೆ ಪುನೀತ್ ಅಭಿನಯದ ನಟಸಾರ್ವಭೌಮ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. 
ರಣವಿಕ್ರಮ ನಂತರ ಮತ್ತೆ ಒಂದಾಗಿರುವ ಪವನ್ ಒಡೆಯರ್ ಹಾಗೂ ಪುನೀತ್ ರಾಜಕುಮಾರ್ ಕಾಂಬಿನೇಷನ್ ಚಿತ್ರ ನಟಸಾರ್ವಭೌಮ ತೀವ್ರ ಕುತೂಹಲ ಮೂಡಿಸಿದ್ದು ಚಿತ್ರದ ಟೀಸರ್ ಇದೇ 21ರಂದು ಬಿಡುಗಡೆಯಾಗಲಿದೆ. 
ರಾಕ್ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಪುನೀತ್ ಗೆ ಜೋಡಿಯಾಗಿ ಇಬ್ಬರು ನಾಯಕರಿಯರು ನಟಿಸುತ್ತಿದ್ದು ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ಮಲಯಾಳಂ ಚೆಲುವೆ ಅನುಪಮ ಪರಮೇಶ್ವರನ್ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?