ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ತೆರೆಗೆ ಅಪ್ಪಳಿಸಿದ ಕೆಜಿಎಫ್; ರಾಕಿಂಗ್ ಸ್ಟಾರ್ ಚಿತ್ರಕ್ಕೆ ಅಭಿಮಾನಿಗಳ ಅದ್ಧೂರಿ ಸ್ವಾಗತ

ಗೊಂದಲದ ನಡುವೆಯೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಿತ್ರ ತೆರೆಕಂಡಿದ್ದು, ವಿಶ್ವಾಂದ್ಯಂತ ಸುಮಾರು 2000 ಸಾವಿರಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಚಿತ್ರ ತೆರೆಕಂಡಿದೆ.

ಬೆಂಗಳೂರು: ಗೊಂದಲದ ನಡುವೆಯೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಿತ್ರ ತೆರೆಕಂಡಿದ್ದು, ವಿಶ್ವಾಂದ್ಯಂತ ಸುಮಾರು 2000 ಸಾವಿರಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಚಿತ್ರ ತೆರೆಕಂಡಿದೆ.
ಕೆಜಿಎಫ್ ಚಿತ್ರ ಕರ್ನಾಟಕದ ಹಲವೆಡೆ ಇಂದು ಮುಂಜಾನೆ 4ಗಂಟೆಗೆ ಮೊದಲ ಪ್ರದರ್ಶನ ಕಂಡಿದ್ದು, ಚಿತ್ರ ನೋಡಿದಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಚಿತ್ರ ಏಕಕಾಲಕ್ಕೆ ಬಿಡುಗಡೆಯಾಗಿದ್ದು, ಸಿನಿಮಾದ ಹಿಂದಿ ಅವತರಣಿಕೆಯು ಒಂದು ಸಾವಿರ ಥಿಯೇಟರ್‌ ಗಳಲ್ಲಿ ಪ್ರದರ್ಶನ ಕಂಡಿದೆ. ಅಂತೆಯೇ ಕರ್ನಾಟಕದಲ್ಲಿ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಇಡೀ ಭಾರತೀಯ ಚಿತ್ರ ರಂಗವೇ ತಿರುಗಿ ನೋಡುವಂತೆ ಸೌಂಡ್ ಮಾಡುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರ ಮಂದಿರಗಳಿಗೆ ಅಲಂಕಾರ ಮಾಡಿರುವ ಅಭಿಮಾನಿಗಳು ಅದ್ಧೂರಿಯಾಗಿ ಕೆಜಿಎಫ್‍ನ್ನು ಸ್ವಾಗತಿಸಿದ್ದಾರೆ. ಕೆಜಿಎಫ್ ಚಿತ್ರ ವಿಶ್ವದಾದ್ಯಂತ 2,000 ಸ್ಕ್ರೀನ್ ಗಳಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.
ವಿದೇಶಗಳಲ್ಲೂ ರಾಕಿಂಗ್ ಸ್ಟಾರ್ ಅಬ್ಬರ
ಇನ್ನು ಇಂದು ಕೆಜಿಎಫ್ ಚಿತ್ರ ಅಮೆರಿಕ, ಕೆನಡಾ ಮತ್ತು ಇಂಗ್ಲೆಂಡ್ ನಲ್ಲಿ ಚಿತ್ರ ತೆರೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಮುಂದಿನಗಳಲ್ಲಿ ಯುರೋಪ್‌ ರಾಷ್ಟ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕರು ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ