ಬೆಂಗಳೂರು: ಶುಕ್ರವಾರ ಬಿಡುಗಡೆಯಾಗಿ ದೇಶಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಕೆಜಿಎಫ್ ಚಿತ್ರದ ಯಶಸ್ಸಿಗೆ ಪ್ರತೀಕವಾಗಿ ನಟ ಯಶ್ ಹಂಚಿಕೊಂಡಿರುವ ಫೋಟೋ ಇದೀಗ ವೈರಲ್ ಆಗುತ್ತಿದೆ.
ರಾಕಿಂಗ್ಸ್ಟಾರ್ ಯಶ್ ಅಭಿನಯದ ಕೆಜಿಎಫ್ ವಿಶ್ವಾದ್ಯಂತ ತೆರೆಕಂಡಿದ್ದು, ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಕೆಜಿಎಫ್ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಎರಡು ದಿನಗಳು ಕಳೆದಿದ್ದು, ರಾಕಿಯ ಆರ್ಭಟ ಮುಂದುವರಿದಿದೆ. ಈ ಖುಷಿಯಲ್ಲಿ ಚಿತ್ರತಂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಇದೇ ಸಂಭ್ರಮದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರ್ ಯಶ್ ಕೆನ್ನೆಗೆ ಮುತ್ತಿಡುತ್ತಿರುವ ಫೋಟೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲದೇ ಈ ಫೋಟೋಗೆ ಇವರೇ ನನ್ನ ದುನಿಯಾ ಎಂದು ಹೇಳುವ ಮೂಲಕ ಯಶ್ ಕೂಡ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಅಂತೆಯೇ ಒಂದು ಚಿತ್ರದ ಯಶಸ್ಸಿಗೆ ನಟ, ನಿರ್ಮಾಪಕ ಮತ್ತು ನಿರ್ದೇಶಕರು ಮೂರು ಆಧಾರ ಸ್ಥಂಭಗಳು ಎಂಬುದನ್ನು ಈ ಚಿತ್ರ ಬಿಂಬಿಸುತ್ತಿದೆಯೇನೋ ಎಂಬಂತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos