ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಇದೇ ಮೊದಲು, ಸೂಪರ್‌ಸ್ಟಾರ್‌ ರಜನಿಕಾಂತ್ 'ಪೆಟ್ಟಾ' ಕನ್ನಡ ಡಬ್ ಚಿತ್ರ ಬಿಡುಗಡೆ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದ್ದು ಈ ಮಧ್ಯೆ ಪರಭಾಷಾ ನಿರ್ಮಾಪಕರು ಸಹ ತಮ್ಮ ಚಿತ್ರವನ್ನು ಕನ್ನಡದಲ್ಲಿ ಡಬ್ ಮಾಡಿ...

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದ್ದು ಈ ಮಧ್ಯೆ ಪರಭಾಷಾ ನಿರ್ಮಾಪಕರು ಸಹ ತಮ್ಮ ಚಿತ್ರವನ್ನು ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
ಹೌದು ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಪೆಟ್ಟಾ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಪೆಟ್ಟಾ ಕನ್ನಡ ಡಬ್ಬಿಂಗ್ ಆವೃತ್ತಿಯ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಹೀಗೆ ಆದರೆ ಮೂಲ ಚಿತ್ರದ ಜೊತೆಗೆ ಕನ್ನಡದಲ್ಲೂ ಬಿಡುಗಡೆಯಾಗುತ್ತಿರುವ ಮೊದಲ ಡಬ್ಬಿಂಗ್ ಚಿತ್ರವಾಗಲಿದೆ. 
ಮೂಲಗಳ ಪ್ರಕಾರ, ಚಿತ್ರದ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಮತ್ತು ನಿರ್ದೇಶಕ ಕಲಾನಿಧಿ ಮಾರನ್ ಅದಾಗಲೇ ಕನ್ನಡದ ಡಬ್ಬಿಂಗ್ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮುಂದಿನ ಜನವರಿ ಪೊಂಗಲ್ ಹಬ್ಬದಂದು ಚಿತ್ರ ದೇಶಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಲಿದೆ. 
ಇದರ ಬೆನ್ನಲ್ಲೇ ತೆಲುಗಿನ ನಟ ರಾಮ್ ಚರಣ್ ತೇಜಾ ನಟನೆಯ ವಿನಯ ವಿದ್ಯಾ ರಾಮ ಚಿತ್ರ ಸಹ ಕನ್ನಡದ ಡಬ್ಬಿಂಗ್ ಆವೃತ್ತಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಕನ್ನಡದ ಕೆಜಿಎಫ್ ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾದ ಬಳಿಕ ಇದೀಗ ಪರಭಾಷಾ ಚಿತ್ರದವರು ತಮ್ಮ ಚಿತ್ರವನ್ನು ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ. 
ಇನ್ನು ಕರ್ನಾಟಕದ ಮಟ್ಟಿಗೆ ಡಬ್ಬಿಂಗ್ ಅನ್ನು ಕನ್ನಡಿಗರು ವಿರೋಧಿಸುತ್ತಲೆ ಬಂದಿದ್ದಾರೆ. ಇದೀಗ ಪರಭಾಷಿಗರು ತಮ್ಮ ಚಿತ್ರಗಳನ್ನು ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿದ್ದು ಕನ್ನಡಿಗರು ಒಪ್ಪಿಕೊಳ್ಳುತ್ತಾರೋ? ಇಲ್ಲವೋ? ಕಾದು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ