ಮಂಡ್ಯ ರಮೇಶ್ 
ಸಿನಿಮಾ ಸುದ್ದಿ

ಮೈಸೂರು: ನಟ ಮಂಡ್ಯ ರಮೇಶ್ ಕಾರು ಅಪಘಾತ, ಅಪಾಯದಿಂದ ಪಾರು

ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಅಪಘಾತಕ್ಕೀಡಾಗಿದೆ.

ಶ್ರೀರಂಗಪಟ್ಟಣ: ನಟ ಮಂಡ್ಯ ರಮೇಶ್ ಪ್ರಯಾಣಿಸುತ್ತಿದ್ದ ಕಾರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಅಪಘಾತಕ್ಕೀಡಾಗಿದೆ. ಶ್ರೀರಂಗಪಟ್ಟಣದ ಲೋಕಪಾವನಿ ಸೇತುವೆ ಬಳಿ ರಾ.ಹೆ-275ರಲ್ಲಿ ಅಪಘಾತ ಸಂಭವಿಸಿದ್ದು ನಟ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿದ್ದ 'ಮಜಾ ಟಾಕೀಸ್' ಶೂಟಿಂಗ್ ಮುಗಿಸಿಕೊಂಡು ಬರುವ ವೇಳೆ ಮುಂಜಾನೆ 7.10ರ ಸುಮಾರಿಗೆ ಕಾರು ಅಪಘಾತಕ್ಕೆ ಈಡಾಗಿದೆ. ಮಂಡ್ಯ ರಮೇಶ್ ತಾವೇ ಕಾರ್ ಚಾಲನೆ ಮಾಡಿಕೊಂಡು ಮೈಸೂರಿಗೆ ವಾಪಾಸಾಗುತ್ತಿದ್ದರು. ಆಗ ಎದುರಿನಿಂದ ಬಂದ ಲಾರಿಗೆ ಕಾರ್ ಡಿಕ್ಕಿ ಆಗುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಅಪ್ಪಳಿಸಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಹಾನಿಗೊಂಡಿದ್ದು ಅದೃಷ್ಟವಶಾತ್ ನಟ ಮಂಡ್ಯ ರಮೇಶ್ ಗೆ  ಯಾವ ಅಪಾಯವೂ ಆಗಿಲ್ಲ. ಅಪಘಾತ ಸಂಬಂಧ ಯಾವ ದೂರು ದಾಖಲಿಸಲಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel