ಸಿನಿಮಾ ಸುದ್ದಿ

10ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ: ಫೆ.22ಕ್ಕೆ ಚಾಲನೆ

Manjula VN
ಬೆಂಗಳೂರು: 10ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಫೆ.22 ರಿಂದ ಚಾಲನೆ ದೊರೆಯಲಿದ್ದು, ಮಾರ್ಚ್.1 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಕ್ತಾಯ ಸಮಾರಂಭ ಹಾಗೂ ಪ್ರಶಸ್ತಿ ವಿತರಣೆ ಕಾರ್ಯಕ್ರಮಗಳು ನಡೆಯಲಿದೆ. 
ಫೆ.22 ರಿಂದ ಮಾರ್ಚ್.1 ರವರೆಗೆ ನಡೆಯುವ ಈ ಬಾರಿಯ ಚಿತ್ರೋತ್ಸವದಲ್ಲಿ ವಿಶ್ವದ 60 ರಾಷ್ಟ್ರ್ಗಳಿಂದ 200 ಚಿತ್ರಗಳು ಪ್ರದರ್ಶನಕ್ಕೆ ಆಯ್ಕೆಯಾಗಿವೆ. ಅಲ್ಲದೆ, ಏಷಿಯನ್ ವಿಭಾಗದಲ್ಲಿ 13, ಭಾರತೀಯ ಸಿನಿಮಾ ವಿಭಾಗದಲ್ಲಿ 14, ಕನ್ನಡ ಸಿನಿಮಾ ವಿಭಾಗದಲ್ಲಿ 12 ಹಾಗೂ ಜನಪ್ರಿಯ ಕನ್ನಡ ಸಿನಿಮಾ ವಿಭಾಗದಲ್ಲಿ 8 ಸಿನಿಮಾಗಳು ಸ್ಪರ್ಧೆಗೆ ಆಯ್ಕೆಯಾಗಿವೆ. 
ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಅವರು, ರಾಜಾಜಿನಗರ ಒರಾಯನ್ ಮಾಲ್ ನ 11 ಸ್ಕ್ರೀನ್ ಗಳನ್ನು ಚಿತ್ರಗಳ ಪ್ರದರ್ಶನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಜೊತೆಗೆ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಿನಿಮಾ ಕಲಾವಿದರ ಸಂಘದ ರಾಜ್ ಭವನ ಮಿನಿ ಚಿತ್ರಮಂದಿರವನ್ನೂ ಚಿತ್ರೋತ್ವವಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 
ಫೆ.22 ರಂದು ವಿಧಾನಸೌಧದ ಮುಂಭಾಗದಲ್ಲಿ ಚಿತ್ರೋತ್ಸವ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್.1ರಂದು ಸಮಾರೋಪ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. ರಾಜ್ಯಪಾಲ ವಜುಭಾಯ್ ವಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ. ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. ಹಲವು, ಸಚಿವರು, ಚಿತ್ರೋದ್ಯಮದ ಗಣ್ಯರು ಇದಕ್ಕೆ ಸಾಕ್ಷಿಯಾಗಲಿದ್ದಾರೆಂದು ತಿಳಿಸಿದ್ದಾರೆ. 
SCROLL FOR NEXT