ಶೃತಿ ಪ್ರಕಾಶ್ 
ಸಿನಿಮಾ ಸುದ್ದಿ

ಎಸ್ ನಾರಾಯಣ್ ನಿರ್ದೇಶನದಲ್ಲಿ ಬಿಗ್‌ಬಾಸ್ ಸ್ಪರ್ಧಿ ಶೃತಿ ಪ್ರಕಾಶ್ ಸ್ಯಾಂಡಲ್‌ವುಡ್‌ಗೆ?

ಕನ್ನಡದ ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಶೃತಿ ಪ್ರಕಾಶ್ ಅವರಿಗೆ ಅದೃಷ್ಟದ ಬಾಗಿಲು ತೆರದಂತಿದೆ. ಕಳೆದ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಹಲವು ಪ್ರತಿಭೆಗಳ...

ಕನ್ನಡದ ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಶೃತಿ ಪ್ರಕಾಶ್ ಅವರಿಗೆ ಅದೃಷ್ಟದ ಬಾಗಿಲು ತೆರದಂತಿದೆ. ಕಳೆದ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಹಲವು ಪ್ರತಿಭೆಗಳ ಅನಾವರಣಗೊಂಡಿದ್ದು ಅದರಲ್ಲಿ ಬಿಗ್‌ಬಾಸ್ ಅಂತಿಮ ಸುತ್ತಿನ ಸ್ಪರ್ಧಿ ಶೃತಿ ಪ್ರಕಾಶ್ ಸಹ ಒಬ್ಬರು. 
ಇದೀಗ ಶೃತಿ ಪ್ರಕಾಶ್ ಅವರಿಗೆ ಸ್ಯಾಂಡಲ್‌ವುಡ್‌ ನಿಂದ ಹಲವು ಆಫರ್ ಗಳು ಬರುತ್ತಿವೆಯಂತೆ. ಇದರಲ್ಲಿ ಪ್ರಮುಖವಾಗಿ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರು ತಮ್ಮ ಮುಂದಿನ ನಿರ್ದೇಶನದ ಚಿತ್ರಕ್ಕೆ ಶೃತಿ ಪ್ರಕಾಶ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಎಲ್ಲಾ ಅಂದುಕೊಂಡಂತೆ ಆದರೆ ಎಸ್ ನಾರಾಯಣ್ ನಿರ್ದೇಶನದ ಚಿತ್ರದ ಮೂಲಕ ಶೃತಿ ಪ್ರಕಾಸ್ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಲಿದ್ದಾರೆ. ಶೃತಿ ಪ್ರಕಾಶ್ ಬೆಳಗಾವಿಯಲ್ಲಿ ವಿದ್ಯಾಬ್ಯಾಸ ಮುಗಿಸಿದ್ದು ಮುಂಬೈನಲ್ಲಿ ನೆಲೆಸಿದ್ದಾರೆ. ಗಾಯಕಿಯಾಗಿರುವ ಶೃತಿ ಹಿಂದಿಯ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.
ಪುತ್ರ ಪಂಕಜ್ ಗಾಗಿ ಎಸ್ ನಾರಾಯಣ್ ಈ ಚಿತ್ರ ಮಾಡುತ್ತಿದ್ದು ಚಿತ್ರಕ್ಕೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT