ಚಿತ್ರದ ಮುಹೂರ್ತ ಸಂದರ್ಭದಲ್ಲಿ 
ಸಿನಿಮಾ ಸುದ್ದಿ

ಪವನ್ ಒಡೆಯರ್ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ಅವರ ಮುಂದಿನ ಚಿತ್ರದ ಬಗ್ಗೆ ವಿವರ ಪಡೆಯಲು ಅವರ ಅಭಿಮಾನಿಗಳು ...

ಪುನೀತ್ ರಾಜ್ ಕುಮಾರ್ ಅವರ ಮುಂದಿನ ಚಿತ್ರದ ಬಗ್ಗೆ ವಿವರ ಪಡೆಯಲು ಅವರ ಅಭಿಮಾನಿಗಳು ಕಾತರರಾಗಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ಅವರು ನಟಿಸುತ್ತಿದ್ದು ಮಾರ್ಚ್ 8ರಿಂದ ಶೂಟಿಂಗ್ ಆರಂಭವಾಗಲಿದೆ ಎಂಬ ಮಾಹಿತಿಗಳನ್ನು ಈ ಹಿಂದೆ ನೀಡಿದ್ದೆವು.

ಇದೀಗ ಚಿತ್ರದ ಮುಹೂರ್ತ ನಿನ್ನೆ ಗಣೇಶ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ರಾಕ್ ಲೈನ್ ಸ್ಟುಡಿಯೊ ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ ನಿರ್ಮಾಪಕ ಮುನಿರತ್ನ ಚಾಲನೆ ನೀಡಿದರು. ಪುನೀತ್ ರಾಜ್ ಕುಮಾರ್ ಉಪಸ್ಥಿತರಿದ್ದರು.

ಚಿತ್ರದ ಶೀರ್ಷಿಕೆ ಸದ್ಯದಲ್ಲಿಯೇ ನಿರ್ಧಾರವಾಗಲಿದೆ. ಚಿತ್ರದ ಕಲಾವಿದರನ್ನು ಕೂಡ ಶೂಟಿಂಗ್ ಆರಂಭಕ್ಕೆ ಮುನ್ನ ಚಿತ್ರತಂಡ ನಿರ್ಧಾರ ಮಾಡಲಿದೆ. ಇದೊಂದು ರೊಮಾಂಟಿಕ್/ಕಾಮಿಡಿ ಚಿತ್ರವಾಗಲಿದ್ದು ಹಿಂದೆಂದೂ ಅಭಿನಯಿಸದ ರೀತಿಯಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯಿಸಲಿದ್ದಾರೆ ಎನ್ನುತ್ತದೆ ಚಿತ್ರತಂಡ.

ಕೋಟಿಗೊಬ್ಬ2ಗೆ ಸಂಗೀತ ಸಂಯೋಜಿಸಿದ್ದ ಡಿ.ಇಮ್ಮಾಮ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ. ವೈಡಿ ಎಸ್ ಕ್ಯಾಮರಾ ಮತ್ತು ಮಹೇಶ್ ಎಸ್ ಅವರ ಸಂಕಲನವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!