ಮಮ್ಮೂಟಿ 
ಸಿನಿಮಾ ಸುದ್ದಿ

ವೈಎಸ್ಆರ್ ಜೀವನ ಕುರಿತ 'ಯಾತ್ರಾ' ಚಿತ್ರಕ್ಕೆ ಮಮ್ಮುಟಿ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಜೀವನ ಚರಿತ್ರೆ ಸಿನಿಮಾ ಆಗುತ್ತಿದ್ದು, ಮಹಿ ವಿ ರಾಘವ್ ನಿರ್ದೇಶನದ ಯಾತ್ರಾ ಚಿತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಮಮ್ಮೂಟಿ...

ಆಂಧ್ರ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಜೀವನ ಚರಿತ್ರೆ ಸಿನಿಮಾ ಆಗುತ್ತಿದ್ದು, ಮಹಿ ವಿ ರಾಘವ್ ನಿರ್ದೇಶನದ ಯಾತ್ರಾ ಚಿತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಮಮ್ಮುಟಿ ನಟಿಸುವ ಸಾಧ್ಯತೆ ಇದೆ. 
ಯಾತ್ರಾ ಸಿನಿಮಾಗೆ ಸಂಬಂಧಿಸಿದಂತೆ ನಿರ್ದೇಶಕ ಮಹಾ ವಿ ರಾಘವ್ ಅವರೊಂದಿಗೆ ಮಮ್ಮುಟಿ ಮಾತುಕತೆ ನಡೆಸಿದ್ದು, ಎಲ್ಲವೂ ಅಂದುಕೊಂಡಂತೆಯೇ ಆದರೆ ರಾಜಶೇಖರ ರೆಡ್ಡಿ ಪಾತ್ರದಲ್ಲಿ ಮಮ್ಮುಟಿ ನಟಿಸಲಿದ್ದಾರೆ. 
ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ಇನ್ನೂ ನಡೆಯುತ್ತಿದೆ. ಯಾತ್ರಾ ಸಿನಿಮಾದ ಕಥೆಯನ್ನು ಮಮ್ಮೂಟಿ ಇಷ್ಟಪಟ್ಟಿದ್ದರೂ ಅಭಿನಯಿಸುವುದರ ಬಗ್ಗೆ ಒಪ್ಪಿಗೆ ಸೂಚಿಸಿಲ್ಲ. ವೈಎಸ್ ಆರ್ ಪಾತ್ರದ ಜೊತೆಗೆ ಇನ್ನೂ ಹಲವು ಪಾತ್ರಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಯಾರು ನಟಿಸಲಿದ್ದಾರೆ ಎಂಬುದರ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. 
ಎಲ್ಲವೂ ಅಂದುಕೊಂಡಂತೆಯೇ ಆದರೆ ಮಮ್ಮುಟಿ 25 ವರ್ಷಗಳ ನಂತರ ತೆಲುಗು ಸಿನಿಮಾದಲ್ಲಿ ನಟಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ