ಸೀತಾರಾಮ ಕಲ್ಯಾಣ ಚಿತ್ರದಲ್ಲಿ ರಾಮ್ ಲಕ್ಷ್ಮಣ್ (ಸಂಗ್ರಹ ಚಿತ್ರ)
ಬೆಂಗಳೂರು: ನಿಖಿಲ್ ಕುಮಾರ್, ರಚಿತಾರಾಮ್ ಅಭಿನಯದ 'ಸೀತಾರಾಮ ಕಲ್ಯಾಣ' ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರಾದ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
'ಸೀತಾರಾಮ ಕಲ್ಯಾಣ' ಚಿತ್ರವನ್ನು ಕನ್ನಡದ ಖ್ಯಾತ ನಿರ್ದೇಶಕ ಎ ಹರ್ಷ ನಿರ್ದೇಶನ ಮಾಡುತ್ತಿದ್ದು, ಇಷ್ಟು ದಿನ 'ಕುರುಕ್ಷೇತ್ರ' ಚಿತ್ರದಲ್ಲಿ ತಲ್ಲೀನರಾಗಿದ್ದ ನಟ ನಿಖಿಲ್ ಕುಮಾರ್ ಇದೀಗ ಈ ಸೀತಾರಾಮ ಕಲ್ಯಾಣದಲ್ಲಿ ತೊಡಗಿಸಿಕೊಳ್ಳಲ್ಲಿದ್ದಾರೆ. ಈ ಹಿಂದೆ ಚಿತ್ರ ಮುಹೂರ್ತ ನೆರವೇರಿಸಿಕೊಂಡಿದ್ದ ತಂಡ ಇದೀಗ ಜನವರಿ 10ರಿಂದ ಚಿತ್ರೀಕರಣ ಆರಂಭಿಸಲಿದೆ. ಚಿತ್ರತಂಡಕ್ಕೆ ಇದೀಗ ಹೊಸ ಸೇರ್ಪಡೆಯಾಗಿ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರಾದ ರಾಮ್ ಲಕ್ಷ್ಮಣ್ ಸೇರಿಕೊಂಡಿದ್ದಾರೆ.
ಚಿತ್ರದ ಸಾಹಸಮಯ ಸನ್ನಿವೇಶಗಳಿಗೆ ಈ ಆ್ಯಕ್ಷನ್ ಬ್ರದರ್ಸ್ ಸಾಹಸ ನಿರ್ದೇಶನ ಮಾಡಲಿದ್ದಾರಂತೆ. ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡಿದ್ದು, ಹರ್ಷ ಜೊತೆ ಹರೀಶ್ ಎಂಬುವವರು ಚಿತ್ರದ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಶರತ್ ಕುಮಾರ್ ನಿಖಿಲ್ ತಂದೆಯ ಪಾತ್ರವನ್ನು ಮಾಡುತ್ತಿದ್ದು, ಚಿತ್ರವನ್ನು ಚೆನ್ನಾಂಬಿಕಾ ಫಿಲಂಸ್ ಸಂಸ್ಥೆಯಡಿ ಅನಿತಾ ಕುಮಾರಸ್ವಾಮಿ ನಿರ್ಮಿಸುತ್ತಿದ್ದಾರೆ.
ಇನ್ನು ನಿರ್ದೇಶಕ ಹರ್ಷ ಅವರ 'ಅಂಜನೀಪುತ್ರ'ದಲ್ಲಿ ಜೊತೆಯಾಗಿದ್ದ ಛಾಯಾಗ್ರಾಹಕ ಸ್ವಾಮಿ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು, ಈ ಚಿತ್ರದಲ್ಲೂ ಜೊತೆಯಾಗುತ್ತಿದ್ದಾರೆ. ಸುನೀಲ್ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics