ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಸಂಕ್ರಾಂತಿ ಹಬ್ಬದ ಶುಭದಿನದಂದು 'ಬಜಾರ್' ಚಿತ್ರಕ್ಕೆ ಪವರ್ ಸ್ಟಾರ್ ಚಾಲನೆ

ಚಮಕ್ ಚಿತ್ರದ ನಂತರ ನಿರ್ದೇಶಕ ಸಿಂಪಲ್ ಸುನಿ ಇದೀಗ ಮತ್ತೊಂದು ಚಿತ್ರದ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಚಿತ್ರಕ್ಕೆ ಬಜಾರ್ ಎಂದು ಹೆಸರಿಡಲಾಗಿದ್ದು ಪವರ್ ಸ್ಟಾರ್...

ಚಮಕ್ ಚಿತ್ರದ ನಂತರ ನಿರ್ದೇಶಕ ಸಿಂಪಲ್ ಸುನಿ ಇದೀಗ ಮತ್ತೊಂದು ಚಿತ್ರದ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಚಿತ್ರಕ್ಕೆ ಬಜಾರ್ ಎಂದು ಹೆಸರಿಡಲಾಗಿದ್ದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಚಿತ್ರಕ್ಕೆ ಕ್ಲ್ಯಾಪ್  ಮಾಡಲಿದ್ದಾರೆ.
ಕಚಗುಳಿ ಇಡುವ ಸಂಭಾಷಣೆ ಹಾಗೂ ಲವ್ ಸ್ಟೋರಿ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ನಿರ್ದೇಶಕ ಸಿಂಪಲ್ ಸುನಿ ಇದೇ ಮೊದಲ ಬಾರಿಗೆ ಅಂಡರ್ ವರ್ಲ್ಡ್ ಕಥಾವಸ್ತುವನ್ನು ಆಯ್ಕೆ ಮಾಡಿದ್ದಾರೆ. 
ಸಂಕ್ರಾಂತಿ ಹಬ್ಬದಂದು ಬಜಾರ್ ಚಿತ್ರದ ಮುಹೂರ್ತ ನೆರವೇರಲಿದ್ದು ಈ ವೇಳೆ ಕ್ಲ್ಯಾಪ್ ಮಾಡುವ ಮೂಲಕ ಪುನೀತ್ ರಾಜಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಇಡೀ ಚಿತ್ರ ಪಾರಿವಾಳದ ಬೆಟ್ಟಿಂಗ್ ಕುರಿತಾಗಿ ಇರಲಿದೆ. 
ಚಿತ್ರದಲ್ಲಿ ಧನ್ ವೀರ್ ನಾಯಕನಾಗಿ ಅಭಿನಯಿಸುತ್ತಿದ್ದು ಚಿತ್ರಕ್ಕಾಗಿ ಸಾಕಷ್ಟು ತಯಾರಿಯನ್ನು ಮಾಡಿಕೊಂಡಿದ್ದಾರೆ. ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಚಿತ್ರಕ್ಕೆ ತಿಮ್ಮೇಗೌಡ ಬಂಡವಾಳ ಹೂಡುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಸಂಯೋಜಿಸುತ್ತಿದ್ದು ಸಂತೋಷ್ ರೈ ಪತಾಜೆ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

SCROLL FOR NEXT