ಕಾಶಿನಾಥ್, ಉಪೇಂದ್ರ, ಉಮಾಶ್ರೀ, ಸುನೀಲ್ ಕುಮಾರ್ 
ಸಿನಿಮಾ ಸುದ್ದಿ

ಗುರುಗಳಿಗೆ ಗುರುವಾಗಿದ್ದ ಕಾಶಿನಾಥ್!

80-90ರ ದಶಕದಲ್ಲಿ ಕನ್ನಡ ಚಿತ್ರರಂಗದ ದಿಸೆಯನ್ನು ಬದಲಿಸಿದ, ಕಡಿಮೆ ವೆಚ್ಚದಲ್ಲಿ ವಿಭಿನ್ನ ಶೈಲಿಯ ಉತ್ತಮ ಚಿತ್ರಗಳನ್ನು ನಿರ್ಮಿಸಬಹುದು ಎಂದು ಸಾಧಿಸಿ ತೋರಿಸಿದ...

80-90ರ ದಶಕದಲ್ಲಿ ಕನ್ನಡ ಚಿತ್ರರಂಗದ ದಿಸೆಯನ್ನು ಬದಲಿಸಿದ, ಕಡಿಮೆ ವೆಚ್ಚದಲ್ಲಿ ವಿಭಿನ್ನ ಶೈಲಿಯ ಉತ್ತಮ ಚಿತ್ರಗಳನ್ನು ನಿರ್ಮಿಸಬಹುದು ಎಂದು ಸಾಧಿಸಿ ತೋರಿಸಿದ, ಹಲವು ಪ್ರತಿಭಾನ್ವಿತರನ್ನು ಚಿತ್ರರಂಗಕ್ಕೆ ಪರಿಚಯಿಸಿದ, ನಟ, ನಿರ್ದೇಶಕ, ನಿರ್ಮಾಪಕ, ಸಂಗೀತ ಸಂಯೋಜಕ ಹೀಗೆ ಚಿತ್ರರಂಗದ ಎಲ್ಲಾ ಕ್ಷೇತ್ರದಲ್ಲೂ ಪ್ರತಿಭೆ ಹೊಂದಿದ್ದ ಕಾಶಿನಾಥ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. 
ಕಾಶಿನಾಥ್ ಅವರು ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದರು. ಬೆಂಗಳೂರಿನ ವಿಜಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಸುರೇಶ್ ಹೆಬ್ಬಾಳ್ಕರ್ ಅವರ ಜತೆ ಸೇರಿ ಅಸೀಮಾ ತಂಡವನ್ನು ಸೇರಿದ್ದರು. 1975ರಲ್ಲಿ ಅಪರೂಪದ ಅತಿಥಿಗಳು ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ 1978ರಲ್ಲಿ ಸುರೇಶ್ ಹೆಬ್ಳೀಕರ್ ಅವರನ್ನಿಟ್ಟುಕೊಂಡು ಸಸ್ಪೆನ್ಸ್ ಥ್ರಿಲ್ಲರ್ 'ಅಪರಿಚಿತ' ಚಿತ್ರವನ್ನು ನಿರ್ದೇಶಿಸಿದ್ದರು. ಕಾಶಿನಾಥ್ ಅವರು ಕನ್ನಡದಲ್ಲಿ ಒಟ್ಟಾರೆ 16 ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇದರಲ್ಲಿ ಹಲವು ಚಿತ್ರಗಳು ಸೂಪರ್ ಡೂಪರ್ ಹಿಟ್ ಆಗಿದ್ದವು. 
1984ರಲ್ಲಿ ಅನುಭವ ಚಿತ್ರದ ಮೂಲಕ ಅಭಿನಯ ಮತ್ತು ಉಮಾಶ್ರೀ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಅನುಭವ ಚಿತ್ರ ಹಲವು ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತ್ತು. ಅವಳೇ ನನ್ನ ಹೆಂಡ್ತಿ, ಅವನೇ ನನ್ನ ಗಂಡ, ಮನ್ಮಥರಾಜ, ಚಪಲಚನ್ನಿಗರಾಯ, ಅಜಗಜಾಂತರ, ಅನಾಮಿಕ, ಅನಂತನ ಅವಾಂತರ, ಹೆಂಡತಿ ಎಂದರೆ ಹೀಗಿರಬೇಕು, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು, ಅಹಾ ನನ್ ತಂಗಿ ಮದುವೆ, ಅಪ್ಪಚ್ಚಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 
ಕಾಶಿನಾಥ್ ಅವರು ಕನ್ನಡ, ಹಿಂದಿ ಮತ್ತು ತೆಲುಗಿನಲ್ಲಿ ಸೇರಿದಂತೆ ಒಟ್ಟಾರೆ 13 ಚಿತ್ರಗಳನ್ನು ನಿರ್ಮಿಸಿದ್ದಾರೆ. ಅದರಲ್ಲಿ 11 ಕನ್ನಡ ಚಿತ್ರಗಳು ಹಾಗೂ ಹಿಂದಿ ಮತ್ತು ತೆಲುಗಿನಲ್ಲಿ ತಲಾ ಒಂದು ಚಿತ್ರವನ್ನು ನಿರ್ಮಿಸಿದ್ದಾರೆ. ಕನ್ನಡದ ಏಳು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದು ಮಂಗಳೂರು ಮಂಜುನಾಥ ಚಿತ್ರ ಬಹಳ ಜನಪ್ರಿಯವಾಗಿತ್ತು. 
ಸ್ಯಾಂಡಲ್ವುಡ್ ಗೆ ರಿಯಲ್ ಸ್ಟಾರ್ ಉಪೇಂದ್ರ, ಸುನೀಲ್ ಕುಮಾರ್ ದೇಸಾಯಿ, ವಿ. ಮನೋಹರ್, ಅಭಿನಯ, ಉಮಾಶ್ರೀ ಸೇರಿದಂತೆ ಹಲವು ತಂತ್ರಜ್ಞರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕಾಶಿನಾಥ್ ಅವರಿಗೆ ಸಲ್ಲುತ್ತದೆ.
ಮೊದಲಿಗೆ ಉಪೇಂದ್ರ ಕಾಶಿನಾಥ್ ಚಿತ್ರಗಳಿಗೆ ಸಂಭಾಷಣೆ ಬರೆಯುತ್ತಿದ್ದರು. ನಂತರ ಕಾಶಿನಾಥ್ ಅವರಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಉಪೇಂದ್ರ ತರ್ಲೆ ನನ್ ಮಗಾ ಚಿತ್ರವನ್ನು ನಿರ್ದೇಶಿಸುವ ಮೂಲಕ ಸ್ವತಂತ್ರ ನಿರ್ದೇಶಕನಾಗಿದ್ದರು. ಇದೇ ರೀತಿ ಸುನೀಲ್ ಕುಮಾರ್ ದೇಸಾಯಿ ಅವರು ಸಹ ಮೊದಲಿಗೆ ಕಾಶಿನಾಥ್ ಅವರ ಬಳಿ ಸಹ ನಿರ್ದೇಶಕನಾಗಿ ಕೆಲಸ ಪ್ರಾರಂಭಿಸಿ ನಂತರ ಹಲವು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್