ಮಾನ್ವಿತ ಹರೀಶ್ 
ಸಿನಿಮಾ ಸುದ್ದಿ

2 ವರ್ಷ ಬಳಿಕ ಮಾನ್ವಿತ ಅಭಿನಯದ ಸಾಲು ಸಾಲು ಚಿತ್ರಗಳು ತೆರೆಗೆ!

ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಮಾನ್ವಿತ ಹರೀಶ್ ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು...

ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಮಾನ್ವಿತ ಹರೀಶ್ ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು 2 ವರ್ಷಗಳ ಬಳಿಕ ಅವರು ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಚಿತ್ರಗಳು ಬಿಡುಗಡೆಯಾಗುತ್ತಿವೆ. 
ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಕನಕ, ಟಗರು ಚಿತ್ರಗಳು ಬಿಡುಗಡೆಗೆ ರೆಡಿಯಾಗಿವೆ. ಇನ್ನು ರಿಲಾಕ್ಸ್ ಸತ್ಯ ಮತ್ತು ತಾರಕಾಸುರ ಚಿತ್ರಗಳ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ನಡೆಯುತ್ತಿವೆ. 
ಕೆಂಡಸಂಪಿಗೆ ಚಿತ್ರದ ನಂತರ ಮಾನ್ವಿತ ಚೌಕದಲ್ಲಿ ಚಿಕ್ಕ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದ ಚಿತ್ರಗಳು ಬಿಡುಗಡೆಯಾಗಿರಲಿಲ್ಲ. 
ನಿರ್ದೇಶಕ ಆರ್ ಚಂದ್ರು ನಿರ್ದೇಶನದ ದುನಿಯಾ ವಿಜಯ್ ಅಭಿನಯದ ಕನಕ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ವಿಜಯ್ ಗೆ ನಾಯಕಿಯಾಗಿ ಮಾನ್ವಿತ ಹರೀಶ್ ಕಾಣಿಸಿಕೊಳ್ಳುತ್ತಿದ್ದಾರೆ. ಕೆಂಡಸಂಪಿಕೆ ಚಿತ್ರದಲ್ಲಿ ನಾನು 19 ವರ್ಷದ ಯುವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಈಗ ನಾನು ಬೆಳೆದ ಹಾಗೆ ಭಾಸವಾಗಿದೆ ಎಂದು ಮಾನ್ವಿತ ಹರೀಶ್ ಹೇಳಿದ್ದಾರೆ.
ಕನಕ ನನ್ನ ಮೊದಲ ಮಾಸ್ ಚಿತ್ರ. ಈ ಚಿತ್ರದಲ್ಲಿ ನಾನು ಮುಗ್ಧಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಕ್ಕದ ಮನೆಯ ಹುಡುಗಿಯಾಗಿ ಮತ್ತು ನಾನು ನನ್ನ ಮುಂದಿನ ಚಿತ್ರಗಳಲ್ಲೂ ಅದೇ ತಾಜಾತನವನ್ನು ತರಲು ಪ್ರಯತ್ನಿಸುತ್ತೇನೆ ಎಂದರು. 
ಕನಕ ಚಿತ್ರದ ಚಿತ್ರೀಕರಣದ ವೇಳೆ ಸಾಕಷ್ಟು ಎಂಜಾಯ್ ಮಾಡಿದೆ. ಹಾಡಿನ ಚಿತ್ರೀಕರಣ, ಸಾಧು ಕೋಕಿಲ ಅವರೊಂದಿಗಿನ ಹಾಸ್ಯ ದೃಶ್ಯಗಳಲ್ಲಿ ಅಭಿನಯಿಸುವಾಗ ಸಾಕಷ್ಟು ಖುಷಿ ಪಟ್ಟೆ. ಆದರೆ ಚಿತ್ರದಲ್ಲಿ ಡಬ್ಬಿಂಗ್ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT