ಅಹ್ಮದಾಬಾದ್ ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬ್ಲಾಕ್ ಬಸ್ಟರ್ ಬಾಹುಬಲಿ ಸಿನಿಮಾದ ಬಗ್ಗೆ ಅಧ್ಯಯನ ನಡೆಸಲು ಮುಂದಾಗಿದೆ.
ಯಶಸ್ವಿ ಚಿತ್ರ ಸಂಸ್ಥೆಗೆ ಕಲೆ, ಉದ್ಯಮ ಹಾಗೂ ತಂತ್ರಜ್ಞಾನ ಹೇಗೆ ಸಹಕಾರಿಯಾಗುತ್ತದೆ ಎಂಬುದರ ಬಗ್ಗೆ ಅಧ್ಯಯನ ನಡೆಸಲು ಬಾಹುಬಲಿ ಸಿನಿಮಾವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಯ್ಕೆ ಮಾಡಿಕೊಂಡಿದೆ. ಐಐಎಂ ನ ಸಂದರ್ಶಕ ಪ್ರಾಧ್ಯಾಪಕರಾಗಿರುವ ಭರತನ್ ಕಂದಸ್ವಾಮಿ ಅಧ್ಯಯನ ತಂಡದಲ್ಲಿದ್ದು, ಚಿತ್ರೋದ್ಯಮದ ಬಗ್ಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಕೋರ್ಸ್ ನ್ನು ನೀಡಲಾಗುತ್ತಿದೆ.
ಬಾಹುಬಲಿ ಸಿನಿಮಾ ಆದಾಯ ಗಳಿಕೆ, ತಂತ್ರಜ್ಞಾನ ಸೇರಿದಂತೆ ಹಲವು ವಿಷಯಗಳಲ್ಲಿ ದಾಖಲೆ ನಿರ್ಮಿಸಿತ್ತು. ಈ ಹಿನ್ನೆಲೆಯಲ್ಲಿ ಐಐಎಂ ಬಾಹುಬಲಿ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದೆ.