ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಟಿ ಅಮಲಾ ಪೌಲ್ ಗೆ ಲೈಂಗಿಕ ಕಿರುಕುಳ; ಚೆನೈನಲ್ಲಿ ದೂರು ದಾಖಲು!

ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಚೆನ್ನೈನ ಟಿ ನಗರ ಪೊಲೀಸ್ ಠಾಣೆಯಲ್ಲಿ ನಟಿ ದೂರು ದಾಖಲು ಮಾಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ.  ಮೂಲಗಳ ಪ್ರಕಾರ ಮಲೇಷ್ಯಾದಲ್ಲಿ ನಡೆಯಲಿರುವ ಕಾರ್ಯಕ್ರಮದ ನಿಮಿತ್ತ ನಟಿ ಅಮಲಾ ಚೆನ್ನೈನಲ್ಲಿ  ನೃತ್ಯ ತರಬೇತಿ ನಡೆಸುತ್ತಿದ್ದರಂತೆ. ಈ ವೇಳೆ ಅನಾಮಿಕ ವ್ಯಕ್ತಿಯೋರ್ವ ನಟಿ ಅಮಲಾ ಪೌಲ್ ಬಳಿ ಬಂದು ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಲೈಂಗಿಕವಾಗಿ ಬಳಸಿಕೊಳ್ಳುವ ಕುರಿತು ಮಾತನಾಡಿದ್ದಾನೆ ಎಂದು ನಟಿ ತಮ್ಮ  ದೂರಿನಲ್ಲಿ ದೂರಿದ್ದಾರೆ ಎಂದು ತಿಳಿದುಬಂದಿದೆ.
ಕಾಲಿವುಡ್ ಖ್ಯಾತ ನೃತ್ಯ ನಿರ್ದೇಶಕ ಶ್ರೀಧರ್ ಅವರ ನೇತೃತ್ವದಲ್ಲಿ ಈ ನೃತ್ಯ ತರಬೇತಿ ನಡೆಯುತ್ತಿತ್ತು ಎಂದು ತಿಳಿದುಬಂದಿದ್ದು, ಈ ಘಟನೆ ನಡೆದ ಸಂದರ್ಭದಲ್ಲಿ ಶ್ರೀಧರ್ ಅವರು ಸ್ಥಳದಲ್ಲಿರಲಿಲ್ಲ ಎನ್ನಲಾಗಿದೆ. ನೃತ್ಯ  ತರಬೇತಿಯಲ್ಲಿ ನಟಿ ಪಾಲ್ಗೊಳ್ಳುವ ಕುರಿತು ಅಲ್ಲಿನ ಸಿಬ್ಬಂದಿಗಳೇ ಮಾಹಿತಿ ಸೋರಿಕೆ ಮಾಡಿರಬಹುದು. ಹೀಗಾಗಿ ಹೊರಗಡೆಯಿಂದ ದುಷ್ಕರ್ಮಿ ನುಸುಳಿರಬಹುದು ಎಂದು ಆಯೋಜಕರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟಿ ಅಮಲಾ, ಡ್ಯಾನ್ಸ್ ರಿಹರ್ಸಲ್ ಮಾಡುವಾಗ ತನ್ನ ಬಳಿ ಬಂದ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ. ನನ್ನನ್ನು ಲೈಂಗಿಕ ಬಳಸಿಕೊಳ್ಳುವ ಕುರಿತು, ಬೇರೊಬ್ಬರಿಗೆ ಮಾರಾಟ  ಮಾಡುವ ಕುರಿತು ಅಸಭ್ಯವಾಗಿ ಮಾತನಾಡಿದ. ಅಲ್ಲದೆ ತನ್ನ ಲೈಂಗಿಕ ಕಾಮನೆಗಳನ್ನು ತೀರಿಸುವಂತೆ ಕೇಳಿದ. ಆತನ ಮಾತುಗಳನ್ನು ಕೇಳಿ ನಿಜಕ್ಕೂ ನಾನು ಆಘಾತಕ್ಕೊಳಗಾದೆ. ಇದೇ ಕಾರಣಕ್ಕೆ ನಾನು ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದೇನೆ ಎಂದು ನಟಿ ಅಮಲಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ ಒಂಟಿ ಉದ್ಯೋಗಸ್ಥ ಮಹಿಳೆಯರಿಗೆ ಭದ್ರತೆ ಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video