ಡಾ.ರಾಜ್ ಕುಮಾರ್ ಮೊಮ್ಮಗ ಯುವ ರಾಜ್ ಕುಮಾರ್ ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ಡಾ.ರಾಜ್ ಕುಮಾರ್ ಮೊಮ್ಮಗ ಯುವ ರಾಜ್ ಕುಮಾರ್ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ?

ವರ ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ, ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ ಕುಮಾರ್ ಅವರ ವಿವಾಹ ನಿಶ್ಚಿತಾರ್ಥ ಜುಲೈ 5 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದಿದೆ...

ಮೈಸೂರು: ವರ ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ, ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ ಕುಮಾರ್ ಅವರ ವಿವಾಹ ನಿಶ್ಚಿತಾರ್ಥ ಜುಲೈ 5 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆದಿದೆ. 
ಮೈಸೂರು ಮೂಲದ ಶ್ರೀದೇವಿ ಎಂಬುವವರ ಜೊತೆಗೆ ರಾಜ್ ಕುಮಾರ್ ಅವರ ಮೊಮ್ಮಗ ಯುವ ರಾಜ್ ಕುಮಾರ್ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 
ನಿಶ್ಚಿತಾರ್ಥ ಸಮಾರಂಭದಲ್ಲಿ ರಾಘವೇಂದ್ರ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದರು. 
ಯುವ ರಾಜ್ ಕುಮಾರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಶ್ರೀದೇವಿಯವರು ಈ ಹಿಂದೆ ಯುವ ರಾಜ್ ಕುಮಾರ್ ಅವರ ಅಣ್ಣ ವಿನಯ್ ರಾಜ್ ಕುಮಾರ್ ಅವರ 'ರನ್ ಆಂಟನಿ' ಸಿನಿಮಾದ ಪ್ರಚಾರ ಸಂಬಂಧ ಜವಾಬ್ದಾರಿ ನೋಡಿಕೊಂಡಿದ್ದರು. ರಾಜ್ ಕುಮಾರ್ ಕುಟುಂಬದ ವಜ್ರೇಶ್ವರಿ ಕಂಬೈನ್ಸ್ ನಲ್ಲಿಯೂ ಕಾರ್ಯನಿರ್ವಹಿಸಿದ್ದರು ಎಂದು ಹೇಳಲಾಗುತ್ತಿದೆ. 
ಇದಲ್ಲದೆ, ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ಅವರು 7 ವರ್ಷಗಳಿಂದ ಸ್ನೇಹಿತರಾಗಿದ್ದು, ಈ ಸ್ನೇಹ ಪ್ರೀತಿಗೆ ತಿರುಗು ಇದೀಗ ಮನೆಯವರ ಒಪ್ಪಿಗೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!