ಶಕೀಲಾ ಪಾತ್ರದಲ್ಲಿ ರಿಚಾ ಚಡ್ಡಾ 
ಸಿನಿಮಾ ಸುದ್ದಿ

ಶಿವಮೊಗ್ಗದಲ್ಲಿ ಶಕೀಲಾ ಜೀವನಾಧಾರಿತ ಚಿತ್ರದ ಶೂಟಿಂಗ್, ಫಸ್ಟ್ ಲುಕ್ ಹೇಗಿದೆ ಗೊತ್ತಾ?

ದಕ್ಷಿಣ ಭಾರತದ ಖ್ಯಾತ ನೀಲಿ ಚಿತ್ರತಾರೆ ಶಕೀಲಾ ಜೀವನಾಧಾರಿತ ಚಿತ್ರದ ಚಿತ್ರೀಕರಣ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆಯುತ್ತಿದೆ.

ಶಿವಮೊಗ್ಗ: ದಕ್ಷಿಣ ಭಾರತದ ಖ್ಯಾತ ನೀಲಿ ಚಿತ್ರತಾರೆ ಶಕೀಲಾ ಜೀವನಾಧಾರಿತ ಚಿತ್ರದ ಚಿತ್ರೀಕರಣ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆಯುತ್ತಿದೆ.
ಶಕೀಲಾ ಪಾತ್ರದಲ್ಲಿ ಬಾಲಿವುಡ್ ನಟಿ ರಿಚಾ ಚಡ್ಡಾ ನಟಿಸುತ್ತಿದ್ದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಬಿಳಿ ಹಾಗೂ ಬಂಗಾರದದ ಬಣ್ಣದ ಸೀರೆಯುಟ್ಟ ರಿಚಾ ಮಲಯಾಳಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ರಿಚಾ ಅವರ ಈ ಕ್ಯೂಟ್ ಭಾವಚಿತ್ರವೀಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.
ಹೊಸನಗರದ ಚಕ್ರಾ ಡ್ಯಾಂ ಬಳಿ ಕಳೆದ ಎರಡು ದಿನಗಳಿಂದ ಶಕೀಲಾ ಚಿತ್ರತಂಡ ಶೂಟಿಂಗ್ ನಲ್ಲಿ ನಿರತವಾಗಿದೆ. ಮಳೆಯ ನಡುವೆಯೇ ಚಿತ್ರೀಕರಣ ನಡೆಯುತ್ತಿದೆ.
ಕನ್ನಡದ ಪ್ರಸಿದ್ದ ನಿರ್ದೇಶಕರಲ್ಲಿ ಒಬ್ಬರಾದ ಇಂದ್ರಜಿತ್ ಲಂಕೇಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹಿಂದಿ ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದ್ದು ಇದಕ್ಕಾಗಿ ನಾಯಕಿ ರಿಚಾ ಸಾಕಷ್ಟು ತಯಾರಿ ನಡೆಸಿದ್ದಾರೆ.
ರಿಚಾ ಸ್ವತಃ ಶಕೀಲಾ ಅವರನ್ನು ಭೇಟಿಯಾಗಿ ಸಲಹೆ ಸೂಚನೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು ಶಕೀಲಾ ಜೀವನದ ಮೇಲೆ ಬೆಳಕು ಚೆಲ್ಲುವ ಈ ಚಿತ್ರ ಅವರ ಅಭಿಮಾನಿಗಳಿಗೆ ತೀವ್ರ ಕುತೂಹಲ ಹುಟ್ಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT