ಕಾಲ ಸ್ಟಿಲ್ 
ಸಿನಿಮಾ ಸುದ್ದಿ

ಕರ್ನಾಟಕದಲ್ಲಿ 'ಕಾಲ' ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಎಸ್ ಐಎಫ್ ಸಿಸಿಗೆ ಚಿತ್ರ ಒಕ್ಕೂಟದ ಸೂಚನೆ

ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ...

ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳವಂತೆ ರಾಷ್ಟ್ರೀಯ ಚಲನಚಿತ್ರ ಸಂಸ್ಥೆ ಸೌತ್ ಇಂಡಿಯನ್ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಗೆ ತಿಳಿಸಿದೆ.
ಕಾವೇರಿ ನದಿ ನೀರಿನ ವಿಚಾರವಾಗಿ ರಜನಿಕಾಂತ್ ಕರ್ನಾಟಕದ ವಿರುದ್ಧವಾಗಿ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು. ಹೀಗಾಗಿ ರಜನಿ ಅಭಿನಯದ ಕಾಲ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಬಾರದೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಲಾಗಿತ್ತು. 
ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬಂದರೂ,ಸುಪ್ರೀಂಕೋರ್ಟ್ ನ ಆದೇಶವನ್ನು ಅನುಷ್ಠಾನಗೊಳಿಸಬೇಕು ಎಂದು ರಜನಿ ಕಾಂತ್  ಹೇಳಿದ್ದರು. ಹೀಗಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕಾಲ ಚಿತ್ರ ಬಿಡುಗಡೆ ರದ್ಧಗೊಳಿಸಿತ್ತು. 
ಭಾರತೀಯ ಚಲನ ಚಿತ್ರ ಒಕ್ಕೂಟದ ಅಧ್ಯಕ್ಷೆ, ಸಾಕ್ಷಿ ಮೆಹ್ರಾ ದಕ್ಷಿಣ ಭಾರತೀಯ.ಚಲನ ಚಿತ್ರ ಒಕ್ಕೂಟಕ್ಕೆ ಮನವಿ ಮಾಡಿದ್ದು, ಚಿತ್ರರಂಗದ ಹಿತಾಸಕ್ತಿಯಿಂದ ಕಾಲಾ ಸಿನಿಮಾ ರಿಲೀಸ್ ಮಾಡಿಸಬೇಕೆಂದು ಹೇಳಿದ್ದಾರೆ.
ಈ ಸಂಬಂಧ ಎಸ್ ಐಎಫ್ ಸ್ಸಿ ಕಾರ್ಯದರ್ಶಿ ಎಲ್. ಸುರೇಶ್,  ಕರ್ನಾಟಕ ಚಲನಚಿತ್ರ ಮಂಡಳಿಗೆ ಮನವಿ ಮಾಡಿದ್ದು, ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಹೇಳಿತ್ತು, ಈ ಸಂಬಂಧ ಸಾ.ರಾ ಗೋವಿಂದು ಅವರಿಗೆ ಪತ್ರ ಬರೆದಿದ್ದು ರಾಜಕೀಯವನ್ನು ಸಿನಿಮಾದೊಂದಿಗೆ ಬೆರಸಬೇಡಿ ಎಂದು ತಿಳಿಸಲಾಗಿದೆ ಎಂದಿದ್ದಾರೆ,
ಮುಖ್ಯಮಂತ್ರಿ ಕುಮಾರ ಸ್ವಾಮಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟ ರಜನೀಕಾಂತ್ ಅಭಿಮಾನಿಗಳು ಆಗ್ರಹಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT