ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ದಿ ವಿಲನ್ ಚಿತ್ರದ ಹಾಡೊಂದಕ್ಕೆ ಧ್ವನಿಯಾಗುವ ಮೂಲಕ ಸ್ಯಾಂಡಲ್‍ವುಡ್‍ಗೆ ಅಂತಾರಾಷ್ಟ್ರೀಯ ಸಿಂಗರ್ ಪಾದಾರ್ಪಣೆ ಮಾಡುತ್ತಿದ್ದಾರೆ.
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಖ್ಯಾತ ನಿರ್ದೇಶಕ ಪ್ರೇಮ್ ನಿರ್ದೇಶನದ ಚಿತ್ರದಲ್ಲಿ ಖ್ಯಾತನಾಮರು ಅಭಿನಯಿಸಿದ್ದಾರೆ. ಆ್ಯಮಿ ಜಾಕ್ಸನ್ ಮತ್ತು ಮಿಥುನ್ ಚಕ್ರವರ್ತಿ ಈ ಚಿತ್ರದ ಮೂಲಕ ಕನ್ನಡಕ್ಕೆ ಪರಿಚಿತರಾಗುತ್ತಿದ್ದಾರೆ. ಇದರ ಜೊತೆಗೆ ಇದೀಗ ಅಂತಾರಾಷ್ಟ್ರೀಯ ಸಿಂಗರ್ ದಲೇರ್ ಮೆಹಂದಿ ಸಹ ಚಿತ್ರದ ಹಾಡೊಂದನ್ನು ಹಾಡಲಿದ್ದಾರೆ.
ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದು ಸಂಗೀತದ ಕುರಿತಂತೆ ಕ್ರೇಜ್ ಹೆಚ್ಚಿಸಿದೆ. ನವದೆಹಲಿಯಲ್ಲಿ ದಲೇರ್ ಮೆಹಂದಿ ಹಾಡಿದ್ದು ರೆಕಾರ್ಡ್ ಮಾಡಿಕೊಳ್ಳಲಾಗಿದೆ.
ನಿರ್ದೇಶಕ ಪ್ರೇಮ್ ಚಿತ್ರಕ್ಕಾಗಿ ಸಖತ್ ಹಾರ್ಡ್ ವರ್ಕ್ ಮಾಡುತ್ತಿದ್ದು ದಿನ ಕಳೆದಂತೆ ಅಭಿಮಾನಿಗಳಲ್ಲಿ ಚಿತ್ರದ ಕುರಿತಂತೆ ಕ್ರೇಜ್ ಹೆಚ್ಚಾಗಿದೆ.