ಕನ್ನಡದ ಎಂಎಂಸಿಎಚ್ ಈಗ ತೆಲುಗಿನಲ್ಲಿ ರಿಯಲ್ ದಂಡುಪಾಳ್ಯಂ 
ಸಿನಿಮಾ ಸುದ್ದಿ

ಕನ್ನಡದ ಎಂಎಂಸಿಎಚ್ ಈಗ ತೆಲುಗಿನಲ್ಲಿ ರಿಯಲ್ ದಂಡುಪಾಳ್ಯಂ

ಮುಸ್ಸಂಜೆ ಮಹೇಶ್ ನಿರ್ದೇಶನದ ಕನ್ನಡ ಚಲನಚಿತ್ರ ಎಂಎಂಸಿಎಚ್ ಇದೀಗ ತೆಲುಗಿಗೆ ಡಬ್ ಆಗಲು ತಯಾರಾಗಿದೆ.

ಬೆಂಗಳೂರು: ಮುಸ್ಸಂಜೆ ಮಹೇಶ್ ನಿರ್ದೇಶನದ ಕನ್ನಡ ಚಲನಚಿತ್ರ ಎಂಎಂಸಿಎಚ್ ಇದೀಗ ತೆಲುಗಿಗೆ ಡಬ್ ಆಗಲು ತಯಾರಾಗಿದೆ. ಐದು ಯುವತಿಯರ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಮೇಘನಾ ರಾಜ್, ಸಂಯುಕ್ತಾ ಹೊರನಾಡು, ಪ್ರಥಮಾ ಪ್ರಸಾದ್, ನಕ್ಷತ್ರಾ ಮತ್ತು ರಾಗಿಣಿ ದ್ವಿವೇದಿ ನಟಿಸಿದ್ದಾರೆ.
ಇದರಲ್ಲಿ ರಾಗಿಣಿ ಪ್ರಮುಖ ಪಾತ್ರಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು ಚಿತ್ರದ ಆವೃತ್ತಿಯನ್ನು ರಿಯಲ್ ದಂಡುಪಾಳ್ಯಂ ಎಂದು ಕರೆಯಲಾಗಿದೆ.
ಚಿತ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಡೆತನದ ಪಿಆರ್ ಕೆ ಆಡಿಯೋ ಸಂಗೀತ ನಿರ್ವಹಣೆ ಮಾಡಿದೆ. ಚಿತ್ರದ ಆಡಿಯೋ ಹಾಗೂ ಟ್ರೇಲರ್ ಇತ್ತೀಚಿಗಷ್ಟೇ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಎಂಎಂಸಿಎಚ್ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ಈ ಚಿತ್ರಕ್ಕೆ ವಿ.ಶ್ರೀಧರ್ ಸಂಭ್ರಮ ಸಂಗೀತ ನೀಡಿದ್ದರೆ ನಾಗೇಶ್ ಆಚಾರ್ಯ ಛಾಯಾಗ್ರಹಣ ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel