ದರ್ಶನ್ 
ಸಿನಿಮಾ ಸುದ್ದಿ

ಪ್ರಜ್ವಲ್ ನಟನೆಯ 'ಇನ್ಸ್‏ಪೆಕ್ಟರ್ ವಿಕ್ರಮ್' ಚಿತ್ರದಲ್ಲಿ ಅತಿಥಿ ನಟನಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‏ಪೆಕ್ಟರ್ ವಿಕ್ರಮ್' ಚಿತ್ರದಲ್ಲಿ ದರ್ಶನ್ ಅತಿಥಿ ನಟನಾಗಿ ಅಭಿನಯಿಸುತ್ತಿದ್ದಾರೆ.ನರಸಿಂಹ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ವಿಕ್ಯಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ದರ್ಶನ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ

ದರ್ಶನ್,  ಯಾವಾಗಲೂ ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಹಿರೋ, ಅತಿಥಿ ನಟನಾಗಿ ಅಭಿನಯಿಸುವ ಮೂಲಕ ತೆರೆ ಮೇಲೂ ಅಂತಹದ್ದೇ ಮ್ಯಾಜಿಕ್ ಮಾಡಲು ಹೊರಟಿದ್ದಾರೆ.
ಚೌಕ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಹೇಗೆ  ಆ ಸಿನಿಮಾಕ್ಕೆ ಸ್ಟಾರ್ ಪವರ್ ತಂದುಕೊಟ್ಟರು  ಎಂಬುದನ್ನ ನಾವು ನೋಡಿದ್ದೇವೆ. ಮತ್ತೆ ಈಗ  ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‏ಪೆಕ್ಟರ್ ವಿಕ್ರಮ್' ಚಿತ್ರದಲ್ಲಿ ಅತಿಥಿ ನಟನಾಗಿ ಅಭಿನಯಿಸುತ್ತಿದ್ದಾರೆ.
ನರಸಿಂಹ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ವಿಕ್ಯಾಂತ್  ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ದರ್ಶನ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ, ಯಾವ ಪಾತ್ರದಲ್ಲಿ ದೇವರಾಜ್ ನಟಿಸುತ್ತಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.ದರ್ಶನ್ ಅವರನ್ನು ತಮ್ಮ ಅಣ್ಣನೆಂದೆ ಪ್ರೀತಿಸುವ ಪ್ರಜ್ವಲ್ ದೇವರಾಜ್   ಈ ಚಿತ್ರದ ಮೂಲಕ  ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದು, ಚಿತ್ರ ಸಿನಿ ಪ್ರಿಯರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.
ಚಿತ್ರ ನಿರ್ಮಾಪಕರು  ದರ್ಶನ್ ಜೊತೆಗೆ ಚರ್ಚಿಸಿದ್ದು, ಪಾತ್ರ ಹೊಂದಿಕೊಳ್ಳುತ್ತದೆ ಎಂದು ಅನ್ನಿಸಿದ ನಂತರವೇ ದರ್ಶನ್ ಈ ಚಿತ್ರವನ್ನು  ಒಪ್ಪಿಕೊಂಡಿದ್ದಾರೆ. ಆದರೆ. ನಿರ್ಮಾಣ ಸಂಸ್ಥೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದಿಲ್ಲ. ದರ್ಶನ್ ಅವರ ಮುಂದಿನ ಚಿತ್ರ ಯಜಮಾನ ಚಿತ್ರೀಕರಣ ವೇಳೆಯಲ್ಲಿ ಅವರನ್ನು ಭೇಟಿಯಾಗಿರುವ ಚಿತ್ರತಂಡ ಅವರಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
 ಪ್ರಜ್ವಲ್ ದೇವರಾಜ್  ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಭಾವನಾ ನಾಯಕಿಯಾಗಿದ್ದಾರೆ. ಡ್ರಗ್ ಡೀಲರ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ, ದರ್ಶನ್ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಮಾತ್ರ ಸಾಕಷ್ಟು ಕುತೂಹಲ ಮೂಡಿಸಿದೆ.
ಫೆಬ್ರವರಿಯಿಂದಲೇ ಸಿನಿಮಾದ ಚಿತ್ರೀಕರಣ ಸಾಗಿದ್ದು, ಜುಲೈ ಎರಡನೇ ವಾರದಿಂದ ಉಳಿದ ಭಾಗದ ಚಿತ್ರೀಕರಣ ಸಾಗಲಿದೆ. ಪ್ರಜ್ವಲ್ ದೇವರಾಜ್ ಹುಟ್ಟಹುಬ್ಬ ಜುಲೈ 4 ರಂದು ಅವರ ಫಸ್ಟ್ ಲುಕ್  ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.  ಚರಣ್ ರಾಜ್  ಸಂಗೀತ ಸಂಯೋಜಿಸಲಿದ್ದು, ನವೀನ್ ಕುಮಾರ್ ಕ್ಯಾಮರಾ ಕೆಲಸ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?