ರವಿಚಂದ್ರನ್ 
ಸಿನಿಮಾ ಸುದ್ದಿ

ಶಿವ ಗಣೇಶ್ ನಿರ್ದೇಶನದ ಥ್ರಿಲ್ಲರ್ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್!

ಜಿಗರ್ ಥಂಡ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ಶಿವ ಗಣೇಶ್ ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ...

ಜಿಗರ್ ಥಂಡ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದ ಶಿವ ಗಣೇಶ್ ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. 
ನಿರ್ಮಾಪಕ ಕೆ ಮಂಜು ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದೆ. ಕೆ ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಪಡ್ಡೆಹುಲಿ ಚಿತ್ರದಲ್ಲಿ ರವಿಚಂದ್ರನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 
ತಮಿಳಿನ ಡಿ-16 ಚಿತ್ರದ ಕಥಾವಸ್ತು ಚನ್ನಾಗಿದ್ದು ಇದರಿಂದ ಸ್ಫೂರ್ತಿ ಪಡೆದು ತಮ್ಮ ಎರಡನೇ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದಾಗಿ ಶಿವ ಗಣೇಶ್ ಹೇಳಿದ್ದಾರೆ. ಇದೊಂದು ಥ್ರಿಲ್ಲರ್ ಚಿತ್ರವಾಗಿದ್ದು ಇದಕ್ಕೆ ರವಿಚಂದ್ರನ್ ಅವರು ಹೊಂದುತ್ತಾರೆ. ಚಿತ್ರದ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳಲಿದ್ದು ಮುಂದಿನ ತಿಂಗಳಿಂದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. 
ಇನ್ನು ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರದಲ್ಲಿ ಕೃಷ್ಣನ ಪಾತ್ರದಲ್ಲಿ ರವಿಚಂದ್ರನ್ ಅಭಿನಯಿಸಿದ್ದು ಬಿಡುಗಡೆಯ ಹಂತದಲ್ಲಿದೆ. ಇನ್ನು ರಾಜೇಂದ್ರ ಪೊಣ್ಣಪ್ಪ ಚಿತ್ರದಲ್ಲೂ ರವಿಚಂದ್ರನ್ ಅಭಿನಯಿಸಿದ್ದು ಈ ಎರಡು ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT