'ಕಿಸ್' ಸಿನಿಮಾದಲ್ಲಿ ನಟಿ ಅಪೂರ್ವ ಗೌಡಗೆ ವಿಶೇಷ ಪಾತ್ರ
ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಬರುತ್ತಿರುವ 'ಕಿಸ್' ಸಿನಿಮಾದ ಹಾಡಿನ ಚಿತ್ರೀಕರಣ ಈಗ ನಡೆಯುತ್ತಿದೆ. ಸಿನಿಮಾಗೆ ಶ್ರೀಲೀಲಾ ನಾಯಕಿ ಆಗಿದ್ದು, ಅದರ ಜೊತೆ...
ಬೆಂಗಳೂರು: ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಬರುತ್ತಿರುವ 'ಕಿಸ್' ಸಿನಿಮಾದ ಹಾಡಿನ ಚಿತ್ರೀಕರಣ ಈಗ ನಡೆಯುತ್ತಿದೆ. ಸಿನಿಮಾಗೆ ಶ್ರೀಲೀಲಾ ನಾಯಕಿ ಆಗಿದ್ದು, ಅದರ ಜೊತೆಗೆ ಸ್ಯಾಂಡಲ್ ವುಡ್ ನ ಇನ್ನೊಬ್ಬ ಯುವ ನಾಯಕಿ ಕೂಡ ಚಿತ್ರದ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ನಟ ವಿರಾಟ್ ಜೊತೆಗೆ ಹೆಜ್ಜೆ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಸಿನಿಮಾವನ್ನು ಸ್ವಲ್ಪ ವಿಭಿನ್ನವಾಗಿ ಮೂಡಬೇಕೆಂದು ಮನಸ್ಸಿನಲ್ಲಿ ಮೂಡಿದಾಗ ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಇಂಟ್ರುಡಕ್ಟರಿ ಸಾಂಗ್ ಗಾಗ್ ಅಪೂರ್ವ ಗೌಡ ಅವರನ್ನು ಕರೆ ತಂದಿದ್ದೇವೆ, ಇದರ ಸಾಹಿತ್ಯವನ್ನು ನಾನೇ ಬರೆದಿದ್ದೇನೆ ಎಂದು ನಿರ್ದೇಶಕ ಎ.ಪಿ ಅರ್ಜುನ್ ಹೇಳಿದ್ದಾರೆ ಕಳೆದ ವಾರ ಹಾಡಿನ ಚಿತ್ರೀಕರಣ ನಡೆದಿದ್ದು, ಇಮ್ರಾನ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಕಿಸ್ ಚಿತ್ರದ ಇನ್ನು ಎರಡು ಹಾಡುಗಳ ಶೂಟಿಂಗ್ ಬಾಕಿಯಿದ್ದು, ವಿದೇಶದಲ್ಲಿ ಶೂಟಿಂಗ್ ಗಾಗಿ ಚಿತ್ರತಂಡ ಶೀಘ್ರವೇ ತೆರಳಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.