ಶ್ರೇಯಾ ಶರಣ್-ಆ್ಯಂಡ್ರಿ ಕೊಸ್ಚೆಯೇವ್ 
ಸಿನಿಮಾ ಸುದ್ದಿ

ಗೆಳೆಯ ಆ್ಯಂಡ್ರಿ ಜತೆ ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೇಯಾ ಶರಣ್

ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ...

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. 
ಮಾರ್ಚ್ 12ರಂದು ಮುಂಬೈನ ತಮ್ಮ ನಿವಾಸದಲ್ಲಿ ಟೆನಿಸ್ ಆಟಗಾರ ಆ್ಯಂಡ್ರಿ ಕೊಸ್ಚೆಯೇವ್ ಜತೆ ಸಪ್ತಪದಿ ತುಳಿದಿದ್ದು ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ತೀರ ಆಪ್ತವರ್ಗಕ್ಕೆ ಮಾತ್ರ ಆಹ್ವಾನ ನೀಡಿದ್ದಾರೆ. 
ಹಿಂದೂ ಸಂಪ್ರದಾಯದಂತೆ ಶ್ರೇಯಾ ಶರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಬಾಲಿವುಡ್ ನಟ ಮನೋಜ್ ಬಾಜಪೇಯಿ ಮತ್ತು ಅವರ ಪತ್ನಿ ಶಬಾನ ಅಜ್ಮಿ ಮಾತ್ರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. 
2001ರಲ್ಲಿ ತೆಲುಗು ಚಿತ್ರ ಇಷ್ಟಂ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದರು. 2018ರಲ್ಲಿ ಬಿಡುಗಡೆಯಾಗಿದ್ದ ತೆಲುಗಿನ ಗಾಯತ್ರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?