ಮೇಲೊಬ್ಬ ಮಾಯಾವಿಯಲ್ಲಿ ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

'ಮೇಲೊಬ್ಬ ಮಾಯಾವಿ'ಯಲ್ಲಿ ಸಂಚಾರಿ ವಿಜಯ್

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಸದ್ಯ ಪ್ರಯೋಗಾತ್ಮಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ...

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಸದ್ಯ ಪ್ರಯೋಗಾತ್ಮಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 
ಸಿಗುವ ಪ್ರತಿಯೊಂದು ಅವಕಾಶದಲ್ಲೂ ವಿಭಿನ್ನ ಪಾತ್ರದಲ್ಲಿ ನಟಿಸಲು ಪ್ರಯತ್ನಿಸುತ್ತಿದ್ದಾರೆ, ಈಗಾಗಲೇ ವಿಜಯ್ ನಟಿಸಿರುವ ನಾಲ್ಕು ಸಿನಿಮಾಗಳು ಬಿಡುಗಡೆಗೆ ಸಿದ್ದವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ, ಸದ್ಯ ಕನ್ನಡ ಮತ್ತು ಮಲಯಾಳಂ ಸಿನಿಮಾಗಳ ಬಿಡುಗಡೆಗೆ ಸಿದ್ಧವಾಗಿವೆ.
ಸದ್ಯ ಮನ್ಸೋರೆ ನಿರ್ದೇಶನದ ನಾತಿಚರಾಮಿ ಚಿತ್ರದಲ್ಲಿ ನಟಿಸುತ್ತಿರುವ ವಿಜಯ್ ಮೇಲೋಬ್ಬ ಮಾಯಾವಿ ಎಂಬ ಮತ್ತೊಂದು ಸಿನಿಮಾಗೂ ಕೂಡ ಸಹಿ ಮಾಡಿದ್ದಾರೆ.
ಪತ್ರಕರ್ತೆ ನವೀನ್ ಕೃಷ್ಣ ನಿರ್ದೇಶನದ ಮೇಲೋಬ್ಬ ಮಾಯಾವಿ ಸಿನಿಮಾದಲ್ಲಿ ನಟಿಸುತ್ತಿರುವ ಸಂಚಾರಿ ವಿಜಯ್, ಚಕ್ರವರ್ತಿ ಚಂದ್ರಚೂಡ್ ಕಥೆ ಚಿತ್ರಕಥೆ ಬರೆದಿದ್ದಾರೆ. ಈ ಸಿನಿಮಾದ ಫರ್ಸ್ಟ ಲುಕ್ ಬಿಡುಗಡೆಯಾಗಿದ್ದು, ಮಾನಸಿಕ ಅಸ್ವಸ್ಥನಂತಿದ್ದು ಚಂದ್ರಚೂಡ್ ಸೆಲ್ಫೀ ತೆಗೆದುಕೊಂಡಿರುವ ಪೋಸ್ಟರ್ ನಲ್ಲಿ ವಾರ್ ಸೆಲ್ಫಿV/S ಸೆಲ್ಫೀ ಎಂಬ ಟ್ಯಾಗ್ ಲೈನ್ ಇದೆ.
ಕೇರಳದಲ್ಲಿ ಇತ್ತೀಚೆಗೆ ಆದಿವಾಸಿ ಯುವಕನೊಬ್ಬನನ್ನು ಥಳಿಸಿ ಆತನ ಜೊತೆ ಸೆಲ್ಫಿ ತೆಗೆದುಕೊಂಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕಥೆಯ ಆಧಾರದ ಮೇಲೆ ಸಿನಿಮಾ ತಯಾರಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ವಿಜಯ್ ತೆಗೆದು ಹಾಕಲಿಲ್ಲ. ಈ ಸಿನಿಮಾದಲ್ಲಿ ಬಡತನ ಮತ್ತು ಹಸಿವಿನ ಚಿತ್ರಣ ಮಾಡಲಾಗಿದೆ. ಏಪ್ರಿಲ್ 10 ರಂದು ಸಂಚಾರಿ ವಿಜಯ್ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ. 
ದೀಪಿತ್ ಛಾಯಾಗ್ರಹಣ ಮಾಡಿರುವ ಈ ಚಿತ್ರದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್,ಅನನ್ಯಾ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಕೃಷ್ಣಮೂರ್ತಿ ಕವತರ್ ,ಬೆನಕ ನಂಜಪ್ಪ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ.  ಶ್ರೀ ಕಟೀಲು ಸಿನಿಮಾಸ್ ಮೂಲಕ ಈ ಚಿತ್ರ ಅದ್ಧೂರಿಯಾಗಿ ಚಿತ್ರೀಕರಣವನ್ನು ಆರಂಭಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT