ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣ ಹೊಸ ಗೇಮ್ ಪ್ಲಾನ್

ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ತೆಲುಗು ಸಿನಿಮಾ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ದರ್ಶನ್ ನಟನೆಯ ಯಜಮಾನ ...

ಬೆಂಗಳೂರು: ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ತೆಲುಗು ಸಿನಿಮಾ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ದರ್ಶನ್ ನಟನೆಯ ಯಜಮಾನ ಸಿನಿಮಾ  ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಕ್ರೀಡಾ ತರಬೇತಿ ಕೂಡ ಪಡೆಯುತ್ತಿದ್ದಾರೆ.
ಭಾರತ್ ಕಮ್ಮ ನಿರ್ದೇಶನದ ವಿಜಯ್ ದೇವರಕೊಂಡ ಗೆ ನಾಯಕಿಯಾಗಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಕ್ರೀಡಾ ತರಬೇತಿ ಪಡೆಯುತ್ತಿದ್ದಾರೆ. ಸಿನಿಮಾದ ಶೂಟಿಂಗ್  ಆರಂಭವಾಗುವ ಮುನ್ನವೇ ಎರಡು ತಿಂಗಳ ತರಬೇತಿ ಪಡೆಯುತ್ತಿದ್ದಾರೆ.
ಬಹಿರಂಗ ಪಡಿಸದ ಸ್ಥಳದಲ್ಲಿ ರಶ್ಮಿಕಾಗೆ ರಾಷ್ಟ್ರೀಯ ಕೋಚ್ ಒಬ್ಬರು ತರಬೇತಿ ನೀಡುತ್ತಿದ್ದಾರೆ. ತನ್ನ ಪಾತ್ರಕ್ಕೆ ನ್ಯಾಯ ಒದಗಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ. ಯಾವ ಕ್ರೀಡೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂಬದನ್ನು ಬಹಿರಂಗ ಪಡಿಸಿಲ್ಲ. ಅಥ್ಲೀಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದು ಸವಾಲಿನ ಪಾತ್ರವಾಗಿದ್ದು, ಇದಕ್ಕಾಗಿ ರಶ್ಮಿಕಾ ಹಲವು ತ್ಯಾಗ ಮಾಡಿದ್ದಾರಂತೆ, ತಮಿಳು ಸಿನಿಮಾದಲ್ಲಿ ನಟಿಸಿ ಸೈ ಅನಿಸಿಕೊಂಡಿರುವ ರಶ್ಮಿಕಾ ತೆಲುಗಿನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ನಾಗಾರ್ಜುನ ಅವರ ಸಿನಿಮಾದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್