ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣ ಬಳಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಪುನೀತ್ ರಾಜ್ ಕುಮಾರ್ ದಂಪತಿ 
ಸಿನಿಮಾ ಸುದ್ದಿ

ಪ್ರಧಾನಿ ಮೋದಿ ಭೇಟಿ: ಸ್ಪಷ್ಟನೆ ನೀಡಿದ ಪುನೀತ್ ರಾಜ್ ಕುಮಾರ್

ಮೂರು ದಿನಗಳ ಹಿಂದೆ ನಗರದಲ್ಲಿ ಬೆಜೆಪಿ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ....

ಬೆಂಗಳೂರು: ಮೂರು ದಿನಗಳ ಹಿಂದೆ ನಗರದಲ್ಲಿ ಬೆಜೆಪಿ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ನಟ ಪುನೀತ್ ರಾಜಕುಮಾರ್ ದಂಪತಿ ಭೇಟಿ ಮಾಡಿದ್ದು ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿಯನ್ನು ಭೇಟಿಯಾಗಿದ್ದಕ್ಕೆ ಸಾಕಷ್ಟು ಚರ್ಚೆ, ಪರ-ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ ಭೇಟಿಯಾಗಿರುವುದು ಸಾಕಷ್ಟು ಊಹಾಪೋಹಗಳನ್ನು ಸಹ ಸೃಷ್ಟಿಸಿತ್ತು.

ಆದರೆ ಇದೀಗ ಭೇಟಿಯ ಬಗ್ಗೆ ಸ್ವತಃ ಪುನೀತ್ ರಾಜಕುಮಾರ್ ಅವರೇ ಸ್ಪಷ್ಟೀಕರಣ ನೀಡಿದ್ದಾರೆ. ಇದು ದೇಶದ ಪ್ರಧಾನಿಗೆ ಗೌರವ ಸಲ್ಲಿಸಲು ಸಿಕ್ಕ ಅವಕಾಶ, ಯಾವುದೇ ರಾಜಕೀಯ ಉದ್ದೆಶದಿಂದ ಅವರನ್ನು ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ.

‘ಮೋದಿಯವರು ಸಾಕಷ್ಟು ಕಾರ್ಯಕ್ರಮಗಳಲ್ಲಿ ಅಪ್ಪಾಜಿಯವರ ಹೆಸರನ್ನು ಹೇಳಿ, ಅವರಿಗೆ ಗೌರವ ಸಲ್ಲಿಸಿದ್ದರು. ಅಪ್ಪಾಜಿಯವರಿಗೆ ದೇಶದ ಪ್ರಧಾನಿ ಗೌರವ ಸಲ್ಲಿಸಿದಾಗ ಅವರಿಗೆ ನಾವೂ ಗೌರವ ಸಲ್ಲಿಸಬೇಕು ಎಂಬ ಉದ್ದೇಶದಿಂದ ನಾನು ಮತ್ತು ನನ್ನ ಪತ್ನಿ ಭೇಟಿ ಮಾಡಿದೆವು. ಅಲ್ಲದೇ ಅವರಿಗೆ ನಾನು ಬರೆದಿದ್ದ ಅಪ್ಪಾಜಿಯವರ ಪುಸ್ತಕ ನೀಡಬೇಕೆಂದು ಕೊಂಡಿದ್ದೆ, ಅದನ್ನು ನೀಡಿದ್ದೇನೆ. ಇದು ಯಾವುದೇ ರೀತಿಯಲ್ಲೂ ರಾಜಕೀಯ ಭೇಟಿಯಲ್ಲ,’ ಎಂದಿದ್ದಾರೆ ಪುನೀತ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!