ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಪೊಗರು ಚಿತ್ರದ ಎರಡನೇ ಹಂತದ ಚಿತ್ರೀಕರಣ ಮೇ 20ರಿಂದ!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ನಂದ ಕಿಶೋರ್ ನಿರ್ದೇಶನದ ಪೊಗರು ಚಿತ್ರದ ಚಿತ್ರೀಕರಣ ಮಾರ್ಚ್ ನಲ್ಲಿ ಶುರುವಾಗಿದ್ದು ಇದೀಗ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ...

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ನಂದ ಕಿಶೋರ್ ನಿರ್ದೇಶನದ ಪೊಗರು ಚಿತ್ರದ ಚಿತ್ರೀಕರಣ ಮಾರ್ಚ್ ನಲ್ಲಿ ಶುರುವಾಗಿದ್ದು ಇದೀಗ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. 
ಪೊಗರು ಚಿತ್ರದಲ್ಲಿ 8ನೇ ತರಗತಿ ವಿದ್ಯಾರ್ಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಧ್ರುವ ಸರ್ಜಾ ಅವರು ಬರೋಬ್ಬರಿ 30 ಕೆಜಿ ತೂಕ ಇಳಿಸಿಕೊಂಡಿದ್ದರು. ಇದೀಗ ಮೇ 20ರಿಂದ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದ್ದು ಧ್ರುವ ಸರ್ಜಾ ಮತ್ತೆ ತಮ್ಮ ಮೈಕಟ್ಟನ್ನು ವೃದ್ಧಿಸಿಕೊಳ್ಳಲಿದ್ದಾರೆ.
ಎರಡನೇ ಹಂತದ ಚಿತ್ರೀಕರಣ ಬೆಂಗಳೂರು ಅಥವಾ ಮಂಗಳೂರಿನಲ್ಲಿ ನಡೆಯಲಿದೆ. ಇನ್ನು ಚಿತ್ರಕ್ಕೆ ನಾಯಕಿ ಯಾರು ಎಂಬುದು ಅಂತಿಮವಾಗಿಲ್ಲ. ಎರಡನೇ ಹಂತದ ಚಿತ್ರೀಕರಣಕ್ಕೂ ಮುನ್ನ ನಿರ್ದೇಶಕರು ನಾಯಕಿಯನ್ನು ಅಂತಿಮಗೊಳಿಸಲಿದ್ದಾರೆ. 
ಚಿತ್ರವನ್ನು ನಂದ ಕಿಶೋರ್ ನಿರ್ದೇಶಿಸುತ್ತಿದ್ದು ಗಂಗಾಧರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದು ವೈಧಿ ಛಾಯಾಗ್ರಹಣವಿರಲಿದೆ. ಇನ್ನು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಶಾನ್ವಿ ಶ್ರೀವಾತ್ಸವ್ ನಾಯಕಿಯರ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!