ಕನ್ನಡದ ನಟಿ ಅನು ಮಾಳೇಟಿರ ಜತೆ ಬಿಗ್ ಬಾಸ್ ಖ್ಯಾತಿಯ ಕ್ರಿಕೆಟಿಗ ಎನ್ ಸಿ ಅಯ್ಯಪ್ಪ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ವಸಂತ ನಗರದಲ್ಲಿರುವ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ಶುಭ ಸಮಾರಂಭ ನಡೆಯಿತು. ಮುಂದಿನ ವರ್ಷ ಕೊಡಗಿನ ವಿರಾಜಪೇಟೆಯಲ್ಲಿ ಈ ಜೋಡಿ ಮದುವೆಯಾಗಲಿದೆ.
ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡು ಕುಟುಂಬದ ಗುರು ಹಿರಿಯರು ಹಾಗೂ ಬಂಧುಗಳು ಹಾಜರಿದ್ದು ಅಯ್ಯಪ್ಪ ಹಾಗೂ ಅನು ಜೋಡಿ ಉಂಗುರವನ್ನು ಬದಲಿಸಿಕೊಂಡಿತು.
ಅನು ಮಾಳೇಟಿರ ಅವರು ಕನ್ನಡದ ಕರ್ವ, ಕಥಾವಿಚಿತ್ರ, ಲೈಫ್ ಸೂಪರ್, ಪಾನಿಪುರಿ ಚಿತ್ರಗಳಲ್ಲಿ ನಟಿಸಿದ್ದಾರೆ.
ಅಯ್ಯಪ್ಪ ಅವರು ಕನ್ನಡದ ನಟಿ ಪ್ರೇಮ ಅವರ ಸಹೋದರ. ರಿಯಾಲಿಟಿ ಶೋ ಬಿಗ್ ಬಾಸ್ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾಗಿದ್ದರು.