ಸಿನಿಮಾ ಸುದ್ದಿ

ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವದಲ್ಲಿ ಮಾಧ್ಯಮ ಪ್ರಶಸ್ತಿ ಪಡೆದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

Vishwanath S
ತಿರುವನಂತಪುರಂ: ಕೇರಳದಲ್ಲಿ ನಡೆದ ಅಂತಾರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವದ ಮೊದಲ ಆವೃತ್ತಿಯ ಅತ್ಯುತ್ತಮ ಪ್ರಸಾರಕ್ಕಾಗಿ ಮಾಧ್ಯಮ ಪ್ರಶಸ್ತಿಯನ್ನು ಪಡೆದಿದೆ. 
ಚಿತ್ರೋತ್ಸವದಲ್ಲಿ ವಿಭಿನ್ನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಪ್ರಸಾರ ಮಾಡಿರುವುದರಿಂದ ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಸಮಾರಂಭದಲ್ಲಿ ಪ್ರಶಸ್ತಿಯನ್ನು ವಿತರಿಸಲಾಯಿತು. ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಮಲಯಾಳ ಮನೋರಮಾ ಜತೆಗೆ ಮುದ್ರಣ ವಿಭಾಗದಲ್ಲಿ ಉತ್ತಮ ಪ್ರಸಾರಕ್ಕಾಗಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಪ್ರಶಸ್ತಿ 10 ಸಾವಿರ ನಗದು ಮತ್ತು ಸ್ಮರಣಿಕೆ ನೀಡಲಾಗಿದೆ. 
ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕೇರಳ ವಿಧಾನಸಭೆ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರು ಮುದ್ರಣ, ದೃಶ್ಯ ಮತ್ತು ಆನ್ ಲೈನ್ ಮಾಧ್ಯಮಗಳ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
SCROLL FOR NEXT