ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಪುನೀತ್ ನಟನೆಯ 'ನಟಸಾರ್ವಭೌಮ' ಹಾರರ್ ಚಿತ್ರವಲ್ಲ: ಪವನ್ ಒಡೆಯರ್

ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ. ಚಿತ್ರವನ್ನು ಗೂಗ್ಲಿ ಖ್ಯಾತಿಯ ಪವನ್ ಒಡೆಯರ್ ನಿರ್ದೇಶಿಸುತ್ತಿದ್ದಾರೆ...

ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಶೂಟಿಂಗ್ ಭರದಿಂದ ಸಾಗಿದೆ. ಚಿತ್ರವನ್ನು ಗೂಗ್ಲಿ ಖ್ಯಾತಿಯ ಪವನ್ ಒಡೆಯರ್ ನಿರ್ದೇಶಿಸುತ್ತಿದ್ದಾರೆ. 
ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಈ ಮಧ್ಯೆ ಪುನೀತ್ ಅವರು ತಮ್ಮ ಕೈಯಲ್ಲಿ ಕಪ್ಪದಾರವನ್ನು ಕಟ್ಟಿಕೊಂಡಿದ್ದು ನಟಸಾರ್ವಭೌಮ ಚಿತ್ರ ಹಾರರ್ ಚಿತ್ರವೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡತೊಡಗಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ದೇಶಕ ಪವನ್ ಇದು ಹಾರರ್ ಚಿತ್ರವಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. 
ಪುನೀತ್ ರಾಜಕುಮಾರ್ ಓರ್ವ ಟ್ರೆಂಡ್ ಸೆಟ್ಟರ್ ನಟ. ಹೀಗಾಗಿ ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಒಂಬತ್ತು ರತ್ನಗಳ ಕಲ್ಲಿನ ಆಭರಣವನ್ನು ಕೈಬೆರಳು ಅಥವಾ ಕುತ್ತಿಗೆಗೆ ಧರಿಸುತ್ತಾರೆ. ಆದರೆ ಪುನೀತ್ ಇದರಲ್ಲಿ ವಿಶೇಷವಾಗಿ ಕೈಗೆ ಕಟ್ಟಿಕೊಂಡಿದ್ದಾರೆ ಅಷ್ಟೇ ಎಂದು ಪವನ್ ಹೇಳಿದ್ದಾರೆ. 
ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ಪರ್ತಕರ್ತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಗೆ ತಂದೆ ಪಾತ್ರದಲ್ಲಿ ಅಭಿನಯಿಸಿರುವ ಶ್ರೀನಿವಾಸ್ ಮೂರ್ತಿ ಅವರು ತಮ್ಮ ನೆನಪಿಗಾಗಿ ಈ ಆಭರಣವನ್ನು ನೀಡಿರುತ್ತಾರೆ. ತಂದೆಯ ನೆನಪಿಗಾಗಿ ಪುನೀತ್ ಈ ಆಭರಣವನ್ನು ತಮ್ಮ ಕೈಗೆ ಕಟ್ಟಿಕೊಂಡಿರುತ್ತಾರೆ ಎಂದು ಪವನ್ ವಿವರಿಸಿದ್ದಾರೆ. 
ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು ಪುನೀತ್ ಗೆ ಜೋಡಿಯಾಗಿ ರಚಿತಾ ರಾಮ್ ಮತ್ತೋರ್ವ ನಟಿ ಅಭಿನಯಿಸಲಿದ್ದಾರೆ. ಚಿತ್ರಕ್ಕೆ ಡಿ ಇಮಾಮ್ ಸಂಗೀತ ಸಂಯೋಜಿಸುತ್ತಿದ್ದು ವೈಧಿ ಅವರ ಛಾಯಾಗ್ರಹಣವಿರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT