ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ದಿನ ಚಾರ್ಲಿ ಚಿತ್ರಕ್ಕೆ ಮುಹೂರ್ತ!

ಕಿರಿಕ್ ಪಾರ್ಟಿ ಚಿತ್ರದ ಯಶಸ್ಸಿನ ನಂತರ ರಕ್ಷಿತ್ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸಲಿದ್ದಾರೆ. ಸದ್ಯ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಸಚಿನ್...

ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಯಶಸ್ಸಿನ ನಂತರ ರಕ್ಷಿತ್ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸಲಿದ್ದಾರೆ. ಸದ್ಯ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಸಚಿನ್ ನಿರ್ದೇಶನದ ಅವನೇ ಶ್ರೀಮನ್ನಾರಾಯಣ ಮತ್ತು ಕಿರಣ್ ರಾಜ್ ಚೊಚ್ಚಲ ನಿರ್ದೇಶನದ ಚಾರ್ಲಿ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. 
ಅವನೇ ಶ್ರೀಮನ್ನಾರಾಯಣ ಚಿತ್ರದ ಚಿತ್ರೀಕರಣ ಶೇಖಡ ಅರ್ಧಭಾಗದಷ್ಟು ಮುಕ್ತಾಯಗೊಂಡಿದೆ. ಈ ಮಧ್ಯೆ ಜೂನ್ 8ರಂದು ಚಾರ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು ಅದಕ್ಕೂ ಮುನ್ನ ಜೂನ್ 6ರಂದು ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ದಿನ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಲಿದೆ. 
ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ಬೃಹತ್ ಸೆಟ್ ಹಾಕಲು ಸಮಯದ ಅವಕಾಶ ಬೇಕಾಗಿರುವುದರಿಂದ ಅಷ್ಟರಲ್ಲಿ ಚಾರ್ಲಿ ಚಿತ್ರದ ಪ್ರಮುಖ ಸನ್ನಿವೇಶಗಳ ಚಿತ್ರೀಕರಣ ಮಾಡಿಕೊಳ್ಳಲು ಚಿತ್ರತಂಡ ತೀರ್ಮಾನಿಸಿದೆ. ಮೈಸೂರಿನಲ್ಲಿ 22 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಈ ಚಿತ್ರವನ್ನು ಪರಂವಾ ಸ್ಟುಡಿಯೋ ಜತೆಗೆ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸುತ್ತಿದ್ದಾರೆ. 
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ದಿನ ಅವನೇ ಶ್ರೀಮನ್ನಾರಾಯಣ ಮತ್ತು ಚಾರ್ಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮೂಲಕ ಎರಡು ಚಿತ್ರತಂಡ ರಕ್ಷಿತ್ ಗೆ ವಿಶೇಖ ಗಿಫ್ಟ್ ನೀಡಲು ಮುಂದಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!