ವಸುಂದರಾ ದಾಸ್ 
ಸಿನಿಮಾ ಸುದ್ದಿ

ಬೆಂಗಳೂರು: ಗಾಯಕಿ ವಸುಂದರಾ ದಾಸ್ ಗೆ ಕಿರುಕುಳ; ಕ್ಯಾಬ್ ಚಾಲಕನ ವಿರುದ್ಧ ದೂರು ದಾಖಲು

ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್​ 29 ರ ಸಂಜೆ 4.30 ರ ಸುಮಾರಿಗೆ ...

ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್​ 29 ರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ.

ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ವಸುಂಧರಾ ದಾಸ್​ ಹೋಗುತ್ತಿದ್ದಾಗ, ಕ್ಯಾಬ್​ ಚಾಲಕ ಭಾಷ್ಯಂ ಸರ್ಕಲ್ ಸಿಗ್ನಲ್‌ನಿಂದ ಹಿಂಬಾಲಿಸಿಕೊಂಡು ಬಂದಿದ್ದಾನೆ. ಇಟಿಯೋಸ್​ ಕಾರಿನಲ್ಲಿ ಬಂದ ಆತ ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಕಾರು ಅಡ್ಡಗಟ್ಟಿದ್ದಾನೆ. ಬಳಿಕ ಆತ ಕಾರಿನಿಂದ ಇಳಿದು ವಸುಂಧರಾ ದಾಸ್ ಕಾರಿನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದೇ ವೇಳೆ ವಸುಂಧರಾ ದಾಸ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ವಸುಂಧರಾ ದಾಸ್‌ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳಗೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಅಷ್ಟರಲ್ಲಾಗಲೇ ಕ್ಯಾಬ್‌ ಚಾಲಕ ಸ್ಥಳದಿಂದ ತೆರಳಿದ್ದಾನೆ.

ಈ ಬಗ್ಗೆ ವಸುಂಧರಾ ದಾಸ್‌ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಷನ್‌ 509 341, 364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್‌ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!