ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

34 ವರ್ಷಗಳ ನಂತರ 'ಬೆಟ್ಟದ ಹೂವು' ಶೂಟಿಂಗ್ ಜಾಗಕ್ಕೆ ಪವರ್ ಸ್ಟಾರ್ ಭೇಟಿ: ವಿಡಿಯೋ ವೈರಲ್!

ಸದ್ಯ ನಟ ಸಾರ್ವಭೌಮ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿ ಆಗಿರುವ ಪುನೀತ್ ರಾಜ್ ಕುಮಾರ್,34 ವರ್ಷಗಳ ಬಳಿಕ ಬೆಟ್ಟದ ಹೂವು ಸಿನಿಮಾದ ಚಿತ್ರೀಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿ ಆ ದಿನದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ದೊಡ್ಮನೆ ಹುಡ್ಗ , ರಾಜಕುಮಾರ, ಪವರ್ ಸ್ಟಾರ್  ಪುನೀತ್ ರಾಜ್ ಕುಮಾರ್  ತಮ್ಮ ಸರಳತೆ, ವಿಧೇಯತೆಯಿಂದಲೂ  ಅಭಿಮಾನಿಗಳ ಪಾಲಿನ ನೆಚ್ಚಿನ ನಾಯಕ ನಟರಾಗಿದ್ದಾರೆ.

ಸದ್ಯ ನಟ ಸಾರ್ವಭೌಮ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿ ಆಗಿರುವ  ಪುನೀತ್ ರಾಜ್ ಕುಮಾರ್,  ಚಿಕ್ಕಮಗಳೂರು ಸುತ್ತಮುತ್ತ ಬೀಡು ಬಿಟ್ಟಿದ್ದಾರೆ. ಚಿತ್ರೀಕರಣದ ಬಿಡುವಿನ ಸಮಯದಲ್ಲಿ  34 ವರ್ಷಗಳ  ಬೆಟ್ಟದ ಹೂವು ಸಿನಿಮಾದ ಚಿತ್ರೀಕರಣ ನಡೆದ ಸ್ಥಳ ನೆನಪಾಗಿದ್ದು, ಕೂಡಲೇ ಅಲ್ಲಿಗೆ ಹೋಗಿದ್ದಾರೆ.

ತಾವೊಬ್ಬ ಸ್ಟಾರ್ ಎಂಬುದನ್ನೆ ಮರೆತು  ಸಿನಿಮಾಗಾಗಿ ಸೆಟ್ ಹಾಕಿದ್ದ ಸ್ಥಳದ ಹುಡುಕಾಟ ನಡೆಸಿದ್ದಾರೆ. ನಂತರ ಖುದ್ದು ಪುನೀತ್ ಅವರೇ ಸ್ಥಳೀಯರನ್ನು ಪರಿಚಯ ಮಾಡಿಕೊಂಡಿದ್ದು, ಅವರೊಟ್ಟಿಗೆ ಪೋಟೋ ತೆಗೆಸಿಕೊಂಡು ಸರಳತೆ ಮೆರೆದಿದ್ದಾರೆ.

ಬೆಟ್ಟದ ಹೂವು ಚಿತ್ರೀಕರಣ ನಡೆದಿದ್ದ ಸ್ಥಳಕ್ಕೆ ಭೇಟಿ ನೀಡಿ, ಹಳೆಯ ನೆನಪುಗಳನ್ನು ಮೆಲುಕು ಹಾಕಿರುವ ವಿಡಿಯೋವೊಂದನ್ನು ತಮ್ಮ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಪುನೀತ್ ರಾಜ್ ಕುಮಾರ್  ಅವರಿಗೆ ಹತ್ತು ವರ್ಷವಿದ್ದಾಗ  ಬೆಟ್ಟದ ಹೂವು ಸಿನಿಮಾ ಚಿತ್ರೀಕರಿಸಲಾಗಿತ್ತು. ಈ ಸಿನಿಮಾದಲ್ಲಿನ ಅಭಿಯನಕ್ಕಾಗಿ ಅವರಿಗೆ ರಾಷ್ಟ್ರ ಪ್ರಶಸ್ಕಿಯೂ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್