ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಬೆಂಗಳೂರು: ನಟ ವಿನೋದ್ ರಾಜ್ ಹಣ ಕದ್ದಿದ್ದ ಖದೀಮ ಅಂದರ್

ನಟ ವಿನೋದ್ ರಾಜ್ ಅವರನ್ನು ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ..

ವಿನೋದ್ ರಾಜ್
Shilpa D
Updated On : 9 Nov 2018, 9:56 am
ಬೆಂಗಳೂರು:  ನಟ ವಿನೋದ್ ರಾಜ್ ಅವರನ್ನು  ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. 
ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು,  ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು.
ಓಜಿಕುಪ್ಪಂ ಗ್ಯಾಂಗ್  ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ  ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ.

Advertisement

Advertisement

ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ. ಬಂಧಿತನನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಆತನ ಗ್ಯಾಂಗ್ ನ ಇತರ ಸದಸ್ಯರನ್ನು ಬಂಧಿಸಿಲು ಬಲೆ ಬೀಸಿದ್ದಾರೆ. 
ನೆಲಮಂಗಲ ಸಿಪಿಐ ಅನಿಲ್ ಕುಮಾರ್ ನೇತೃತ್ವದ ತಂಡ ಬಲೆ ಬೀಸಿದೆ. ಆರೋಪಿ ಬಂಧನದಿಂದ ನಟ ವಿನೋದ್ ರಾಜ್ ಸಂತಸ ವ್ಯಕ್ತಪಡಿಸಿದ್ದು, ಮುಂದೆ ಈ ಖದೀಮರ ಗ್ಯಾಂಗ್ ಯಾರಿಗೂ ದ್ರೋಹ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement