`ಗೀತಾ` ಚಿತ್ರದ ಮುಹೂರ್ತ ಸಮಾರಂಭ 
ಸಿನಿಮಾ ಸುದ್ದಿ

ಶಂಕರ್ ನಾಗ್ ಹುಟ್ಟುಹಬ್ಬದಂದು ಗೋಲ್ದನ್ ಸ್ಟಾರ್ ಗಣೇಶ್ ಅಭಿನಯದ `ಗೀತಾ` ಚಿತ್ರ ಆರಂಭ

ನವಂಬರ್ 9ರಂದು ಶಂಕರ್‍ನಾಗ್ ಅವರ ಹುಟ್ಟುಹಬದಂದು, ಮಹಾಲಕ್ಷ್ಮೀ ಲೇಔಟ್‍ನ ಪಂಚಮುಖಿ ದೇವಸ್ಥಾನದಲ್ಲಿ `ಗೀತಾ` ಚಿತ್ರ ಆರಂಭವಾಯಿತು.

ಹಿಂದೆ ಶಂಕರ್ ನಾಗ್ ಅವರ ಅಭಿನಯದಲ್ಲಿ `ಗೀತಾ` ಚಿತ್ರ ಮೂಡಿಬಂದಿದ್ದು ಎಲ್ಲರಿಗೂ ತಿಳಿದ ವಿಷಯ. ಈಗ ಅದೇ ಹೆಸರಿನ ಚಿತ್ರ ಮತ್ತೊಮ್ಮೆ ನಿರ್ಮಾಣವಾಗುತ್ತಿದೆ. ನವಂಬರ್ 9ರಂದು ಶಂಕರ್‍ನಾಗ್ ಅವರ ಹುಟ್ಟುಹಬದಂದು, ಮಹಾಲಕ್ಷ್ಮೀ ಲೇಔಟ್‍ನ ಪಂಚಮುಖಿ ದೇವಸ್ಥಾನದಲ್ಲಿ `ಗೀತಾ` ಚಿತ್ರ ಆರಂಭವಾಯಿತು. ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ಸಂತೋಷ್ ಆನಂದರಾಮ್ ಆರಂಭ ಫಲಕ ತೋರಿದರು. ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ಮಾಡಿದರು.

ಎಸ್.ಎಸ್.ಫಿಲಂಸ್ ಹಾಗೂ ಗೋಲ್ಡನ್ ಮೂವೀಸ್ ಮೂಲಕ ಸೈಯದ್ ಸಲಾಂ ಹಾಗೂ ಶಿಲ್ಪಾಗಣೇಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿ ಜನಮನಸೂರೆಗೊಂಡ `ಮುಗುಳುನಗೆ` ಚಿತ್ರ ಇವರ ನಿರ್ಮಾಣದಲ್ಲೇ ಮೂಡಿಬಂದಿತು.

`ಮಿಸ್ತರ್ & ಮಿಸ್ಸಸ್ ರಾಮಾಚಾರಿ’ ಹಾಗೂ `ರಾಜಕುಮಾರ’ ಚಿತ್ರಗಳಿಗೆ ಸಂತೋಷ್ ಆನಂದರಾಮ್ ಅವರ ಜೊತೆ ಕಾರ್ಯ ನಿರ್ವಹಿಸಿ ಅನುಭವವಿರುವ ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.

ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಕೇರಳದ ಪಾರ್ವತಿ ಅರುಣ್, ಪ್ರಯಾಗ ಮಾಲ್ಟಿನ್ ಹಾಗೂ ಶಾನ್ವಿ ಶ್ರೀವಾಸ್ತವ್ ಮೂವರು ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಸುಧಾರಾಣಿ, ದೇವರಾಜ್, ರಂಗಾಯಣ ರಘು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಡಿಸಂಬರ್ ಎರಡನೇ ವಾರದಲ್ಲಿ ಕೋಲ್ಕತ್ತಾದಲ್ಲಿ ಚಿತ್ರೀಕರಣ ಆರಂಭವಾಗಲಿದೆ. ನಂತರ ಮೈಸೂರು, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!