ಮೆಲ್ಬೋರ್ನ್: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆಸ್ತೇಲಿಯಾದ ಮೆಲ್ಬೋರ್ನ್ ನಲ್ಲಿರುವ ಕನ್ನಡ ಸಂಘವು "ಮೂಂಬಾ ಸ್ಟಾರ್" ಪುರಸ್ಕಾರವನ್ನು ನೀಡಿ ಗೌರವಿಸಿದೆ.
ಮೆಲ್ಬೋರ್ನ್ ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಫಲಕ ಸ್ಮರಣಿಕೆ ನೀಡಿ ಸನ್ಮಾನಿಸಲಾಗಿದೆ.
ಮೂಂಬಾ ಫೆಸ್ಟಿವಲ್ ಎಂದು ಕರೆಯಲ್ಪಡುವ ಈ ಕಾರ್ಯಕ್ರಮ ಆಸ್ಟ್ರೇಲಿಯಾದಲ್ಲಿ ಪ್ರತಿ ವರ್ಷ ನಡೆಯುತ್ತದೆ. ಸುಮಾರು ಮೂರರಿಂದ ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು 1955ರಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಆಚರಣೆಗಳ ಪ್ರದರ್ಶನ, ಸುಡುಮದ್ದು ಪ್ರದರ್ಶನ, ಲೈವ್ ಸಂಗೀತ ಮತ್ತು ವಾದ್ಯಗೋಷ್ಠಿ ಸೇರಿ ಅನೇಕ ಕಾರ್ಯಕ್ರಮಗಳು ಇರುತ್ತದೆ.