ಶೃತಿ ಹರಿಹರನ್ 
ಸಿನಿಮಾ ಸುದ್ದಿ

ನಾನು ಸಕ್ಕರೆಯಂತೆ, ಮಾಧ್ಯಮಗಳು ಇರುವೆ ಇದ್ದಂತೆ: ನಾನು ಹಾಗೆ ಹೇಳಿಯೇ ಇಲ್ಲ; ವರಸೆ ಬದಲಿಸಿದ ಶೃತಿ

ನಾನು ಸಕ್ಕರೆ ಇದ್ದಂತೆ, ಮಾಧ್ಯಮಗಳು ಇರುವೆ ಎಂದು ನಾನು ಹೇಳಿಯೇ ಇಲ್ಲ ಎಂದು ನಟಿ ಶೃತಿ ಹರಿಹರನ್ ತಮ್ಮ ಮಾತು ಬದಲಿಸಿದ್ದಾರೆ....

ಬೆಂಗಳೂರು:  ನಾನು ಸಕ್ಕರೆ ಇದ್ದಂತೆ, ಮಾಧ್ಯಮಗಳು ಇರುವೆ ಎಂದು ನಾನು ಹೇಳಿಯೇ ಇಲ್ಲ ಎಂದು ನಟಿ ಶೃತಿ ಹರಿಹರನ್ ತಮ್ಮ ಮಾತು ಬದಲಿಸಿದ್ದಾರೆ.
ಬುಧವಾರ ಮಹಿಳಾ ಆಯೋಗದ ಕಚೇರಿಗೆ ಆಗಮಿಸಿ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ ನಂತರ ಈ ಕುರಿತು ಪ್ರಶ್ನಿಸಿದಾಗ, ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಮಾತು ಬದಲಿಸಿದರು. ಮಾಧ್ಯಮಗಳ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ವರಸೆ ಬದಲಿಸಿದ್ದಾರೆ.
ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿತ್ತು. 
ಮಹಿಳಾ ಅಯೋಗ ಶೃತಿಗೆ ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಸೂಚಿಸಿತ್ತು.  ಈ ಹಿನ್ನೆಲೆಯಲ್ಲಿ ಇಂದು ವಕೀಲ ಅನಂತ್ ನಾಯ್ಕ್ ಅವರ ಜೊತೆ ಮಹಿಳಾ ಆಯೋಗದ ಮುಂದೆ ಹಾಜರಾದ ಶೃತಿ, ವಿಸ್ಮಯ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ.
ಶೃತಿಯನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡ ಹೋದ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನೂ ನಟಿ ಶೃತಿ ಹರಿಹರನ್ ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರನ್ನು ನವೆಂಬರ್ 14ರ ವರೆಗೆ ಬಂಧಿಸಬಾರದು ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ನವೆಂಬರ್ 28ರವರೆಗೆ ವಿಸ್ತರಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

SCROLL FOR NEXT