ಹುಬ್ಬಳ್ಳಿ: ಕರ್ನಾಟಕದಲ್ಲಿ ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹೈಕಮಾಂಡ್ ಬಯಸಿದರೇ ತಾವು ಸಿಎಂ ಹುದ್ದೆ ಅಲಂಕರಿಸಲು ಸಿದ್ಧ ಎಂದು ನಿನ್ನೆಯಷ್ಟೇ ಡಿಸಿಎಂ ಪರಮೇಶ್ವರ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಸದ್ಯ ಸಿಎಂ ಹುದ್ದೆ ಖಾಲಿಯಿಲ್ಲ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪರಮೇಶ್ವರ್ ತಮಗೆ ಸಿಎಂ ಆಗುವ ಸಾಮರ್ಥ್ಯವಿದೆ ಎಂಬ ಬಗ್ಗೆ ತಿಳಿಸಿದ್ದಾರೆ, ಕಾಂಗ್ರೆಸ್ ನಲ್ಲಿ ಹಲವು ನಾಯಕರುಗಳಿಗೆ ಸಿಎಂ ಆಗುವ ಅರ್ಹತೆಯಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮತ್ತು ಕಾಂಗ್ರೆಸ್ ಶಾಸಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
ಜನಾದೇಶದಂತೆ ಕಾಂಗ್ರೆಸ್ ಜೆಡಿಎಸ್ ಗೆ ಮುಖ್ಯಮಂತ್ರಿ ಹುದ್ದೆ ನೀಡಿದೆ, ಹೀಗಾಗಿ ಸದ್ಯ ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ ಎಂದು ತಿಳಿಸಿದ್ದಾರೆ.