'ಯಜಮಾನ'ಗಾಗಿ ಸ್ವೀಡನ್‌ನಲ್ಲಿ ದರ್ಶನ್-ರಶ್ಮಿಕಾ ಮಂದಣ್ಣ ಡ್ಯುಯೆಟ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಯಜಮಾನ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು ಕೊನೆಯ ಹಂತದ ಚಿತ್ರೀಕರಣಕ್ಕಾಗಿ ಚಿತ್ರದ ತಂಡ ಸ್ವಿಡನ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಯಜಮಾನ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು ಕೊನೆಯ ಹಂತದ ಚಿತ್ರೀಕರಣಕ್ಕಾಗಿ ಚಿತ್ರದ ತಂಡ ಸ್ವಿಡನ್ ಗೆ ಹಾರಲಿದೆ.
ಅಪಘಾತದ ಬಳಿಕ ಚೇತರಿಸಿಕೊಂಡಿರುವ ದರ್ಶನ್ ಸದ್ಯ ಯಜಮಾನ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ. ಚಿತ್ರತಂಡ ಇಂದು ಸ್ವಿಡನ್ ಗೆ ಹಾರಲಿದ್ದು ಮುಂದಿನ ಏಳು ದಿನಗಳ ಕಾಲ ಹಾಡಿನ ಚಿತ್ರೀಕರಣ ನಡೆಯಲಿದೆ.
ಚಿತ್ರವನ್ನು ಶೈಲಜಾ ನಾಗ್ ಮತ್ತು ಬಿ ಸುರೇಶ್ ನಿರ್ಮಾಣ ಮಾಡುತ್ತಿದ್ದು ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರವನ್ನು ಪಿ ಕುಮಾರ್ ನಿರ್ದೇಶಿಸುತ್ತಿದ್ದಾರೆ.
ಕೊನೆಯ ಹಂತದ ಚಿತ್ರೀಕರಣ ಮುಗಿದ ನಂತರ ಪೋಸ್ಟ್ ಪ್ರೊಡೆಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಲಿದೆ.