ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಮಿಮಿಕ್ರಿ ಮಾಡಿ, ಅಭಿಮಾನಿಗಳಿಗೆ ಅಪ್ಪು ಜೊತೆ ವೇದಿಕೆ ಹಂಚಿಕೊಳ್ಳುವ ಅವಕಾಶ!

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ನಟಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅದೃಷ್ಟವಂತ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಹುದಾಗಿದೆ.

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ನಟಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ  ಅದೃಷ್ಟವಂತ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಹುದಾಗಿದೆ.

ಪುನೀತ್ ರಾಜ್ ಕುಮಾರ್ ಅವರೇ ಮಾಡಿರುವ ವಿಡಿಯೋದಲ್ಲಿ ಈ ಆಶ್ಚರ್ಯಕರ ಸುದ್ದಿಯೊಂದನ್ನು ಪ್ರಕಟಿಸಿದ್ದಾರೆ. ಅಪ್ಪು ರೀತಿಯಲ್ಲಿ ಮಿಮಿಕ್ರಿ ಮಾಡುವ ಅಭಿಮಾನಿಗಳು ನಟ ಸಾರ್ವಭೌಮ ಚಿತ್ರದ ಆಡಿಯೋ  ಬಿಡುಗಡೆ  ವೇದಿಕೆ ಹಂಚಿಕೊಳ್ಳಬಹುದೆಂದು ಅವರು ತಿಳಿಸಿದ್ದಾರೆ.

ಈ ವರ್ಷ ಬಿಡುಗಡೆಯಾಗಿರುವ ಟೀಸರ್ ನಲ್ಲಿ ಕ್ಯಾಮರಾ ಕೈಯಲ್ಲಿಟ್ಟುಕೊಂಡು ವಿಶಿಷ್ಠ ರೀತಿಯಲ್ಲಿ ಪೋಸ್ ನೀಡಿದ್ದು, ಪೋಟೋ ಜನರ್ಲಿಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರಂತೆಯೇ ಅಭಿನಯ ಮಾಡುವ ಅಭಿಮಾನಿಗಳು  ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಬಹುದು ಅಭಿನಂದನೆ ಸ್ವೀಕರಿಸಬಹುದು ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.

ನಟಸಾರ್ವಭೌಮ ಚಿತ್ರದ ಚಿತ್ರೀಕರಣ ಮಂಗಳವಾರ ಮುಕ್ತಾಯವಾಗಿದ್ದು, ಪುನೀತ್ ರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ತಂತ್ರಜ್ಞರು ಅಂತಿಮ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ