ಅಂಬಿ ಅಂತ್ಯಕ್ರಿಯೆಗೆ ಬಾರದ ರಮ್ಯಾ: ಮಾಜಿ ಸಂಸದೆಗೆ ಮಂಡ್ಯ ಜನತೆಯ ಭಾವಪೂರ್ಣ ಶ್ರದ್ದಾಂಜಲಿ !
ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಜನರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಸಾಮಾಜಿಕ ...
ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಜನರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಮ್ಯಾ ಇಂದು ಮಂಡ್ಯ ಜನತೆಯ ಪಾಲಿಗೆ ಇಂದು ನಿಧನರಾಗಿದ್ದಾರೆ ಎಂಬ ಸಾಲುಗಳನ್ನು ಬರೆದುಕೊಳ್ಳುತ್ತಿದ್ದಾರೆ.
ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಮಂಡ್ಯದಲ್ಲಿ ರಮ್ಯಾ ವಿರುದ್ಧ ಆಕ್ರೋಶ ಮುಂದುವರೆದಿದೆ.
ಅಂಬರೀಶ್ ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ ಅಂಬಿ ಅಂತಿಮ ದರ್ಶನಕ್ಕಾದರೂ ರಮ್ಯಾ ಮಂಡ್ಯಕ್ಕೆ ಬರಬೇಕಿತ್ತು. ಅಲ್ಲದೇ ಓರ್ವ ಮಂಡ್ಯದ ಮಗಳಾಗಿ ರಮ್ಯಾ ಆಗಮಿಸಬೇಕಿತ್ತು. ಆದರೆ ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಅಂಬರೀಶ್ ವಿರುದ್ಧವೇ ಇನ್ನೂ ದ್ವೇಷ ಸಾಧಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.