ಹಿರಿಯ ನಟಿ ಲಕ್ಷ್ಮೀ ಮತ್ತು ನಿರ್ದೇಶಕ ಎಸ್.ನಾರಾಯಣ್ 
ಸಿನಿಮಾ ಸುದ್ದಿ

ಹಿರಿಯ ನಟಿ ಲಕ್ಷ್ಮೀ, ನಿರ್ದೇಶಕ ಎಸ್.ನಾರಾಯಣ್'ಗೆ ಜೀವಮಾನ ಸಾಧನೆ ಪ್ರಶಸ್ತಿ

ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು...

ಬೆಂಗಳೂರು: ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು ಆಯ್ಕೆಯಾಗಿದ್ದಾರೆ. 
ಪ್ರಶಸ್ತಿಯು ತಲಾ ರೂ.50 ಗ್ರಾಂ ಚಿನ್ನದ ಪದಕ ಮತ್ತು ಎರಡು ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ. 
2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲು ನಟ ಮತ್ತು ನಿರ್ಮಾಪಕ ಜಿ.ಕೆ.ಶ್ರೀನಿವಾಸ ಮೂರ್ತಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ  ಮಾಡಲಾಗಿತ್ತು. 
ಇದರಂತೆ ಸೋಮವಾರ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದರು. 
ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಪಂಚಭಾಷೆ ತಾರೆ ಲಕ್ಷ್ಮೀ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ನಿರ್ದೇಶಕರಿಗೆ ನೀಡುವ ಪುಟ್ಟಣ ಕಣಗಾಲ್ ಪ್ರಶಸ್ತಿಗಾಗಿ ನಿರ್ದೇಶಕ ಎಸ್.ನಾರಾಯಣ್ ಮತ್ತು ಚಿತ್ರರಂಗದ ವಿವಿಧ ವಲಯದಲ್ಲಿ ಸಾಧನೆ ಮಾಡಿದ ಹಿರಿಯರಿಗೆ ನೀಡುವ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ನಿರ್ಮಾಪಕ ಜಿ.ಎನ್.ಲಕ್ಷ್ಮೀಪತಿಯವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT